ಕಾಂಗ್ರೆಸ್ ಪರ ಜನರ ತೀರ್ಪು ದೊಡ್ಡ ಸಂಚಲನ : ಜಿ. ಎಸ್. ಮಂಜುನಾಥ್

suddionenews
1 Min Read

ಚಿತ್ರದುರ್ಗ, (ಮೇ.13) : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕೆ.ಸಿ. ವೀರೇಂದ್ರ ಪಪ್ಪಿ ಅವರ ಗೆಲುವು ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಗೆ ಜನರು ನೀಡಿದ ತೀರ್ಪು ದೊಡ್ಡ ಸಂಚಲವನ್ನೇ ಸೃಷ್ಟಿ ಮಾಡಿದೆ. ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳು ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದು ಮತ್ತೊಂದು ಕ್ಷೇತ್ರವಾದ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ಮಾಜಿ ಸಚಿವ ಆಂಜನೇಯ ಅವರ ನಡೆಯಿಂದ  ಕ್ಷೇತ್ರ ಸೋಲಿಗೆ ಕಾರಣವಾಗಿದೆ ಎಂದು ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಜಿ. ಎಸ್. ಮಂಜುನಾಥ್ ಹೇಳಿದರು.

ತಾಲ್ಲೂಕಿನ ಭೀಮಸಮುದ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಚಿತ್ರದುರ್ಗ ವಿಧಾನಸಭಾ
ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದರು.

ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ
ಗಿರಿ ಎಂ ಜಾನಕಲ್ ಮಾತನಾಡಿ,  ಜಿ.ಎಸ್.ಟಿ.
ನೋಟ್ ಬ್ಯಾನ್ ಜನರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದ ಕಾರಣ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿದ್ದಾರೆ.
ಜನರಿಗೆ ಬೇಕಾದ ಸೌಲಭ್ಯಗಳನ್ನು ರಾಜ್ಯ ಸರ್ಕಾರ ನೀಡಲು ವಿಫಲವಾಗಿದೆ. ಆದ ಕಾರಣ ಕಾಂಗ್ರೆಸ್ ಸರ್ಕಾರವನ್ನು ಒಪ್ಪಿ ಜನಬಹುಮತ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿರುವ ಪ್ರಣಾಳಿಕೆ ಎಲ್ಲವೂ ಕೂಡ ಜಾರಿ ಮಾಡುತ್ತದೆ ಎಂದು ಹೇಳಿದರು.

ಜನರಿಗೆ ಬೇಕಾಗಿರುವುದು ಸಾರಿಗೆ ವ್ಯವಸ್ಥೆ, ಪಡಿತರ ಚೀಟಿ, ರೈತರಿಗೆ ಗಂಗಾ ಕಲ್ಯಾಣ ಯೋಜನೆ, ಮಕ್ಕಳಿಗೆ ಉಚಿತ ಶಿಕ್ಷಣ,  ಏರ್ಪೋರ್ಟ್ ಗಳ ನಿರ್ಮಾಣದಿಂದ ಏನು ಮಾಡಲು ಸಾಧ್ಯ ಎಂದು ತಿಳಿಸಿದರು.
ಹಾಗೆಯೇ ರಾಜ್ಯ ಜನತೆಗೆ ಹಾಗೂ ಜಿಲ್ಲೆಯ ಜನತೆಗೆ ಕಾಂಗ್ರೆಸ್ ಸರ್ಕಾರ ಬರಲು ಕಾರಣರಾಗಿದ್ದಾರೆ ಅವರಿಗೆ ನಮ್ಮ ಹೃತ್ಪೂರ್ವಕ ಧನ್ಯವಾದ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *