ಜನರ ದುಡ್ಡು ಆಕಾಶದಲ್ಲಿ ಜಾತ್ರೆ : ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

suddionenews
1 Min Read

ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಇತ್ತಿಚೆಗೆ ದೆಹಲಿ ಪ್ರವಾಸಕ್ಕೆ ಹೋಗಿದ್ದರು. ಸಿಎಂ ಸಿದ್ದರಾಮಯ್ಯ, ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಅಲ್ಲಿಂದ ವಾಪಾಸ್ ಆಗುವಾಗ ಸಚುವ ಜಮೀರ್ ಅಹ್ಮದ್ ವಿಮಾನದಲ್ಲಿ ಬರುವಾಗ, ವಿಡಿಯೋ ಮಾಡಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೆಲ್ಲಾ ವೈರಲ್ ಆಗಿದೆ.

ಈ ವಿಡಿಯೋಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕಿಡಿಕಾರಿದ್ದಾರೆ.”ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ. ಜನರ ದುಡ್ಡು ಆಕಾಶದಲ್ಲಿ ಜಾತ್ರೆ”.
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ @BZZameerAhmedK ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಶಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವ ಮುಖ್ಯಮಂತ್ರಿ @siddaramaiah ನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ.

ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನ ಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ….” ಎಂದು ವರ್ಣಿಸಬಹುದಾಗಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *