ಚಿತ್ರದುರ್ಗ. ನವೆಂಬರ್.18 : ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಿದೆ. ಇದನ್ನು ರಾಜ್ಯದಲ್ಲಿನ ಅಂದಿನ ಕರ್ನಾಟಕ ಸರ್ಕಾರ ಜಾರಿ ಮಾಡಲು ಮುಂದಾಗಿತ್ತು. ಆದರೆ ಈಗ ಆಧಿಕಾರದಲ್ಲಿನ ಕಾಂಗ್ರೆಸ್ ಸರ್ಕಾರ ಇದನ್ನು ರದ್ದು ಮಾಡಿ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲು ಮುಂದಾಗಿರುವುದು ದುರಂತ ಇದರ ವಿರುದ್ದ ಜನಾಂದೋಲನ ಕೈಗೊಂಡು ಸಹಿ ಸಂಗ್ರಹ ಕಾರ್ಯವನ್ನು ಮಾಡುವುದಾಗಿ ಸರ್ಕಾರಕ್ಕೆ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್ ಎಚ್ಚರಿಕೆಯನ್ನು ನೀಡಿದ್ದಾರೆ.
ನಗರದ ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಸದ ವಿವಿದೆಗಳಲ್ಲಿ ಬ್ರಟಿಷರ ಕಾಲದ ಶಿಕ್ಷಣ ನೀತಿ ಜಾರಿಯಲ್ಲಿ ಇತ್ತು ಇದನ್ನು ತೆಗೆಯುವ ಹಿನ್ನಲೆಯಲ್ಲಿ ಬಿಜೆಪಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಿತು. ಇದನ್ನು ಕರ್ನಾಟಕದಲ್ಲಿ ಜಾರಿ ಮಾಡಲಾಗಿತ್ತು. ಇದರಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಅಭ್ಯಾಸವನ್ನು ಮಾಡುವ ಮಕ್ಕಳಿಗೆ ಅನುಕೂಲವಾಗುತ್ತಿತು.
ಆದರೆ ಈಗ ಅಧಿಕಾರದಲ್ಲಿರುವ ಕಾಂಗ್ರಸ್ ಸರ್ಕಾರ ಇದನ್ನು ರದ್ದು ಮಾಡಿ ತನ್ನದೆ ಆದ ರಾಜ್ಯ ಶಿಕ್ಷಣ ನೀತಿಯನ್ನು ಜಾರಿ ಮಾಡಲು ಹೊರಟ್ಟಿರುವುದೆ ಇದಕ್ಕಾಗಿ 15 ಜನರ ಸಮಿತಿಯನ್ನು ರಚನೆ ಮಾಡಿ ಎಸ್ ಇಪಿಯನ್ನು ಜಾರಿ ಮಾಡಲು ಮುಂದಾಗಿರುವುದು ದುರಂತವಾಗಿದೆ ಎಂದರು.