Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನರಿಗೆ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗುತ್ತಿದೆ : ಜಿ. ಎಸ್. ಮಂಜುನಾಥ್

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ಡಾ. ಸರ್. ಎಂ. ವಿಶ್ವೇಶ್ವರಯ್ಯನವರು ಕನ್ನಡದಲ್ಲಿ ಓದಿ ಇಂಜಿನಿಯರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗುತ್ತಿದೆ ಎಂದು ಜಿ ಎಸ್ ಮಂಜುನಾಥ್ ಹೇಳಿದರು.

ತಾಲ್ಲೂಕಿನ ಭೀಮಸಮುದ್ರ ಸಮೀಪದ ಹಿರೇಗುಂಟನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಪ್ರಾರಂಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕನ್ನಡ ಭಾಷೆ ಮಾತೃಭಾಷೆ, ನಾವು ಅದನ್ನು ಗೌರವಿಸಬೇಕು. ನಮ್ಮ ತಂದೆಯವರು ಶಾಸಕರಾಗಿದ್ದರು. ನಮ್ಮನ್ನ ಸರ್ಕಾರಿ ಶಾಲೆಯಲ್ಲಿ ಸೇರಿಸಿ ಕನ್ನಡದಲ್ಲಿ ಓದಿಸಿದ್ದಾರೆ. ನಾವೆಲ್ಲ ಕನ್ನಡದಲ್ಲಿ ವಿದ್ಯಾಭ್ಯಾಸ ಮಾಡಿದ್ದೇವೆ. ಇತ್ತೀಚಿನ ದಿನಗಳಲ್ಲಿ ಇಂಗ್ಲೀಷ್ ಎನ್ನುವುದು ತಂದೆ ತಾಯಿಗಳಿಗೆ ವ್ಯಾಮೋಹವಾಗಿದೆ. ಹಿಂದಿನ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಸ್ಥಾನದಲ್ಲಿದ್ದಾರೆ. ಸರ್ಕಾರದ ಆದೇಶದಂತೆ ಇಂಗ್ಲೀಷ್ ಮಾಧ್ಯಮ ತೆರೆದಿರುವುದು ಬಹಳ ಸಂತೋಷಕರ ವಿಷಯ. ಕನ್ನಡದಲ್ಲಿ 53 ಅಕ್ಷರಗಳಿವೆ. ಆದರೆ ಇಂಗ್ಲಿಷ್ ನಲ್ಲಿರುವುದು 26. ಆದರೂ ಕೂಡ ನಮಗೆ ಇಂಗ್ಲೀಷ್‌ ಹೆಚ್ಚು. ಹಳೆಯ ಕಾಲಕ್ಕೂ ಈಗಿನ ಕಾಲಕ್ಕೂ ತುಂಬಾ ವ್ಯತ್ಯಾಸಗಳಿವೆ. ಬೇರೆ ಭಾಷೆ ಪರಿಹಾರ ಅಷ್ಟೇ. ಮಕ್ಕಳಲ್ಲಿ ಒಂದು ವಿನಂತಿ ಸರ್ಕಾರ ಕೊಟ್ಟಿರುವ ಅವಕಾಶವನ್ನು ಬಳಸಿಕೊಳ್ಳಿ. ಮುಂದೆ ವಿದ್ಯಾವಂತರಾಗಿ ಶಾಲೆಗೆ ಹಾಗೂ ತಂದೆ ತಾಯಿಗಳಿಗೆ ಹೆಸರು ತರಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಉಪಾಧ್ಯಕ್ಷರಾದ ಶ್ರೀಮತಿ ನವೀನ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ವಸಂತ್, ಜಾಕಿರ್, ಕುಮಾರಸ್ವಾಮಿ, ಮಲ್ಲಿಕಾರ್ಜುನ್, ಮಂಜುನಾಥ್, ಬಾಬು, ಪ್ರಸಾದ್, ಮುಖ್ಯ ಶಿಕ್ಷಕರಾದ ಎಚ್ ಆನಂದಪ್ಪ, ಎಸ್ ಡಿ ಎಮ್ ಸಿ ಸದಸ್ಯರುಗಳು ಹಾಗೂ ಶಿಕ್ಷಕಿಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment