Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ : ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 17 : ಅಹಿಂದಾ ನಾಯಕ, ಬಡವರ ಬಂಧು, ಅನ್ನದಾತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಒನಕೆ ಓಬವ್ವ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿ ಬಿಜೆಪಿ ಜೆಡಿಎಸ್. ವಿರುದ್ದ ಧಿಕ್ಕಾರಗಳನ್ನು ಕೂಗಲಾಯಿತು.

ಪ್ರಜಾಪ್ರಭತ್ವವನ್ನು ಕಗ್ಗೊಲೆ ಮಾಡುತ್ತಿರುವ ರಾಜ್ಯಪಾಲರ ವಿರುದ್ದ ಗೋಬ್ಯಾಕ್ ಧಿಕ್ಕಾರಗಳನ್ನು ಕೂಗಿದ ಪ್ರತಿಭಟನಾಕಾರರು ಪ್ರಧಾನಿ ಮೋದಿ ಹಾಗೂ ಅಮಿತ್‍ಶಾ ವಿರುದ್ದ ಕಿಡಿಕಾರಿದರು.

ಕೇಂದ್ರ ಸರ್ಕಾರದ ಕೈಗೊಂಬೆಯಾಗಿರುವ ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ. ರಾಜ್ಯವನ್ನು ಹಸಿವು ಮಕ್ತವನ್ನಾಗಿ ಮಾಡಲು ಹೊರಟಿರುವುದು ಕೇಂದ್ರ ಬಿಜೆಪಿ.ಗೆ ಸಹಿಸಲು ಆಗುತ್ತಿಲ್ಲ. ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾನಿರತರು ಎಚ್ಚರಿಸಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್, ಜಿಲ್ಲಾಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ನಗರಸಭೆ ಮಾಜಿ ಸದಸ್ಯ ಹೆಚ್.ಮಂಜಪ್ಪ, ಡಿ.ಎನ್.ಮೈಲಾರಪ್ಪ, ಸಂಪತ್, ಎನ್.ಡಿ.ಕುಮಾರ್, ಎಸ್.ಎನ್.ರವಿಕುಮಾರ್, ಸೈಯದ್ ಖುದ್ದೂಸ್, ಮಾಳೇಶ್, ರಾಜಣ್ಣ, ಪ್ರಕಾಶ್‍ರಾಮನಾಯ್ಕ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...