Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮುರುಘಾ ಶ್ರೀಗಳಿಗೆ ಚಿತ್ರದುರ್ಗಕ್ಕೆ ಬರಲು ಅನುಮತಿ..!

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 01 : ಪೋಕ್ಸೋ ಪ್ರಕರಣದಲ್ಲಿ ಶ್ರೀಗಳು ಅರೆಸ್ಟ್ ಆಗಿದ್ದರು. ಬಳಿಕ ಪ್ರಕರಣದಲ್ಲಿ ಶ್ರೀಗಳು ಜಾಮೀನು ಪಡೆದು ಹೊರಗೆ ಬಂದಿದ್ದರು. ಆದರೆ ಚಿತ್ರದುರ್ಗಕ್ಕೆ ಹೋಗುವುದಕ್ಕಾಗಲಿ, ಮಠದ ಆಡಳಿತದಲ್ಲಿ ಅಧಿಕಾರ ಚಲಾಯಿಸುವುದಕ್ಕಾಗಲಿ ಯಾವುದೇ ಅನುಮತಿ‌ ಇರಲಿಲ್ಲ. ಕೆಲವೊಂದು ಸಹಿ ಬೇಕೇ ಬೇಕು ಎಂದಾಗ ಮಠದ ಆಡಳಿತ ಮಂಡಳಿ ಜೈಲಿಗೆ ಬಂದು ಸಹಿ ಹಾಕಿಸಿಕೊಂಡು ಹೋದ ಉದಾಹರಣೆಗಳು ಇದಾವೆ. ಆದರೆ ಈಗ ಮಠದ ಭಕ್ತರಿಗೆ ಸಂತಸದ ವಿಷಯವೊಂದು ಹೊರ ಬಿದ್ದಿದೆ. ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಚಿತ್ರದುರ್ಗಕ್ಕೆ ಬರಲು ಕೋರ್ಟ್ ಅನುಮತಿ ನೀಡಿದೆ.

ಪೋಕ್ಸೋ ಕೇಸ್ ನಲ್ಲಿ ಜಾಮೀನು ಪಡೆದು ಹೊರಗೆ ಬಂದ ಬಳಿಕ ಶ್ರೀಗಳು ದಾವಣಗೆರೆಯಲ್ಲಿ ವಾಸವಾಗಿದ್ದರು. ಈ ಕೇಸ್ ಸಂಬಂಧ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ 12 ಸಾಕ್ಷ್ಯಗಳ ವಿಚಾರಣೆ ಮುಕ್ತಾಯವಾಗಿದೆ. ಎ-1 ಆರೋಪಿ ಸ್ಥಾನದಲ್ಲಿರುವ ಶ್ರೀಗಳ ಸಾಕ್ಷ್ಯ ವಿಚಾರಣೆ ಕೂಡ ಮುಕ್ತಾಯವಾಗಿದೆ. ಈಗ ಖುದ್ದು ಹೇಳಿಕೆಗೆ ದಿನಾಂಕ ನಿಗದಿ ಮಾಡಲಾಗಿದೆ. ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಲು ಜುಲೈ 3 ರಂದು ಚಿತ್ರದುರ್ಗಕ್ಕೆ ಆಗಮಿಸಿಲಿದ್ದಾರೆ. ಇದು ಇಡೀ ಭಕ್ತವೃಂದಕ್ಕೆ ಸಂತಸ ತಂದ ವಿಚಾರವಾಗಿದೆ.

ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಸೋಮವಾರ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ್ದು, ಶಿವಮೂರ್ತಿ ಮುರುಘಾ ಶರಣರ ಹೇಳಿಕೆಗೆ ಜುಲೈ 3 ರಂದು ದಿನಾಂಕ ನಿಗದಿ ಮಾಡಿದೆ. ಮುರುಘಾಶ್ರೀ ಖುದ್ದಾಗಿ ಹಾಜರಾಗಿ ಹೇಳಿಕೆ ದಾಖಲಿಸಿ, ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಇದೀಗ ಶ್ರೀಗಳ ಆಗಮನಕ್ಕೆ ಭಕ್ತವೃಂದ ಎಲ್ಲಾ ತಯಾರಿ ಮಾಡಿಕೊಂಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment