ಹೈಟೆಕ್ ಶೌಚಾಲಯ ನಿರ್ಮಾಣ ವಿರೋಧಿಸಿ ಬೀದಿಬದಿ ವ್ಯಾಪಾರಿಗಳಿಂದ ಶಾಸಕ ಟಿ ರಘುಮೂರ್ತಿಗೆ ಮನವಿ

1 Min Read

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಜನವರಿ.05 : ನಗರದ ಚಿತ್ರದುರ್ಗ ರಸ್ತೆಯ ಸರ್ಕಾರಿ ಆಸ್ಪತ್ರೆಯ ಮುಂಭಾಗದ ಬೀದಿ ಬದಿ ವ್ಯಾಪಾರಿಗಳ ಸ್ಥಳದಲ್ಲಿ ನಗರಸಭೆ ವತಿಯಿಂದ ಹೈಟೆಕ್ ಶೌಚಾಲಯ ನಿರ್ಮಿಸಲು ಉದ್ದೇಶಿಸಿದ್ದು ಇದನ್ನು ವಿರೋಧಿಸಿ ಶುಕ್ರವಾರ ಎಐಟಿಯುಸಿ ಸಂಘಟನೆಯ ಮುಖಂಡ ಸಿವೈ ಶಿವರುದ್ರಪ್ಪನವರ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಿಗಳ ಸಂಘದ ಸದಸ್ಯರು ಶಾಸಕ ಟಿ ರಘುಮೂರ್ತಿಯವರಿಗೆ ಸ್ಥಳದಲ್ಲಿ ಶೌಚಾಲಯ ನಿರ್ಮಿಸಿದಂತೆ ಮನವಿ ಮಾಡಿದರು.

ಈ ವೇಳೆ ಮಾತನಾಡಿದ ಎಐಟಿಯುಸಿ ಸಂಘಟನೆಯ ಮುಖಂಡ ಸಿ ವೈ ಶಿವರುದ್ರಪ್ಪ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಹಣ್ಣು ಹೂ ಎಲೆ ಅಡಿಕೆ ಲಘು ಉಪಹಾರ ಪಾನಿಪುರಿ ಎಗ್ ರೈಸ್ ಸೇರಿದಂತೆ 150ಕ್ಕೂ ಹೆಚ್ಚು ಇತರೆ ವ್ಯಾಪಾರಿಗಳು ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 9:30ವರೆಗೆ ವ್ಯಾಪಾರ ಮಾಡಿ ತಮ್ಮ ಕುಟುಂಬವನ್ನು ನಿರ್ವಹಣೆ ಮಾಡುತ್ತಿದ್ದಾರೆ ನಗರಸಭೆ ಪೌರಾಯುಕ್ತರು ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡುತ್ತೇವೆ ಸ್ಥಳವನ್ನು ತೆರವುಗೊಳಿಸುವಂತೆ ತಿಳಿಸಿದ್ದಾರೆ ಇದರಿಂದಾಗಿ ಸುಮಾರು 300 ಕುಟುಂಬಗಳು ಬೀದಿ ಪಾಲಾಗುತ್ತಿದ್ದು ತಮ್ಮ ಜೀವನ ನಿರ್ವಹಣೆಗಾಗಿ ಪರಿತಪಿಸುವಂತಾಗಿದೆ ಕೂಡಲೇ ನಗರಸಭೆ ಅಧಿಕಾರಿಗಳು ಈ ನಿರ್ಧಾರದಿಂದ ಹಿಂದೆ ಸರಿದು ಬೀದಿ ಬದಿ ವ್ಯಾಪಾರಿಗಳ ಹಿತ ಕಾಯಬೇಕು ಎಂದು ಒತ್ತಾಯಿಸಿದರು‌.

ಶಾಸಕ ಟಿ ರಘುಮೂರ್ತಿ ಮಾತನಾಡಿ ನಗರದ ಅಭಿವೃದ್ಧಿ ದೃಷ್ಟಿಯಿಂದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ ನಾನೇ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಯಾರಿಗೂ ಅನ್ಯಾಯವಾಗದಂತೆ ನಗರದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಿಗಳಾದ ವೆಂಕಟೇಶ್ ವರಲಕ್ಷ್ಮಿ ಮಂಜಮ್ಮ ಮಂಜುನಾಥ ಗೌರಮ್ಮ ಅನಸೂಯಮ್ಮ ಶೃತಿ ವೀರೇಂದ್ರಯ್ಯ ಆರ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *