ಸುದ್ದಿಒನ್, ಬೆಂಗಳೂರು,ಮೇ.15: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಜನಸಾಮಾನ್ಯರ ಮೇಲೆ ಹೊರೆಯಾಗುವ ಈ ನಿರ್ಧಾರವನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ. ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು. ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ಈಗ ಏನು ಪ್ರತಿಕ್ರಿಯೆ ಕೊಡುತ್ತಾರೆ ಎನ್ನುವುದನ್ನು ನೋಡಬೇಕು ಎಂದರು.
ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್ ದರಗಳನ್ನು ಹೆಚ್ಚಿಸಿದ್ದಾರೆ. ಈ ಬೆಲೆಯೇರಿಕೆ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ವಿಶೇಷವಾಗಿ ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರದ ಈ ಬೆಲೆ ಏರಿಕೆಯ ಕ್ರಮವನ್ನು ನಮ್ಮ ಸರ್ಕಾರ ಖಂಡಿಸುವುದಲ್ಲದೇ, ಈ ನಿರ್ಣಯವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಯವರ ಆಡಳಿತ ಪ್ರಾರಂಭವಾಗುವ ಮುಂಚೆ 413 ರೂ.ಗಳಿದ್ದ ಗೃಹಬಳಕೆಯ ಎಲ್ ಪಿ ಜಿ ದರ, ಈಗ 1000 ರೂ.ಗಳನ್ನು ದಾಟಿದೆ. ಈ ಬೆಲೆಯೇರಿಕೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಎಲ್ ಪಿ ಜಿ ಪೂರೈಕೆ ವ್ಯತ್ಯಯವಾಗಿರುವ ನಡುವೆಯೇ ಬೆಲೆ ಏರಿಕೆಯು ಜನಜೀವನವನ್ನು ಇನ್ನಷ್ಟು ಅಸ್ತವ್ಯಸ್ತಗೊಳಿಸಲಿದೆ. ರಾಜ್ಯದಲ್ಲಿ ಚುನಾವಣಾ ಆಯೋಗದಿಂದ ಎಸ್ ಐ ಆರ್ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಇದಕ್ಕೆ ಬೇಕಾದ ಸಿದ್ದತೆಯನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದರು.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ.
ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು. ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ… pic.twitter.com/aJhcbUvgLR
ಇದನ್ನು ಓದಿBREAKING NEWS : ರಾಜ್ಯಸಭೆ ಚುನಾವಣೆ ; ಕಾಂಗ್ರೆಸ್ ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ಅವಿರೋಧವಾಗಿ ಆಯ್ಕೆ— Siddaramaiah (@siddaramaiah) May 15, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















