ಬೆಂಗಳೂರು: ರಾಜ್ಯದಲ್ಲಿ ಮೊದಲೇ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆಯಾಗುತ್ತಿಲ್ಲ ಅಂತ ವಾಹನ ಸವಾರರು ಹಿಡಿ ಶಾಪ ಹಾಕುತ್ತಿದ್ದರು. ಈ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಏರಿಕೆ ಮಾಡಿದೆ. ಇದು ವಿಪಕ್ಷಗಳನ್ನ ಕೆರಳಿಸಿದ್ದು, ಇಂದು ಬೃಹತ್ ಪ್ರತಿಭಟನೆಗೆ ಸಜ್ಜಾಗಿವೆ.
ರಾಜ್ಯದ ನಾನಾ ಕಡೆಯಲ್ಲಿ ಪ್ರತಿಭಟನೆಗೆ ಪ್ಲ್ಯಾನ್ ಮಾಡಿದ್ದಾರೆ. ಮುಖ್ಯವಾವಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಲು ಸಿದ್ದವಾಗಿದ್ದು, ಎತ್ತಿನ ಗಾಡಿ, ಸೈಕಲ್ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ. ದರ ಇಳಿಸುವವರೆಗೂ ಹಂತ ಹಂತವಾಗಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಬಿಜೆಪಿ ನೀಡಿದೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಬಗ್ಗೆಯೇ ಸಾಕಷ್ಟು ಪ್ರಚಾರ ತೆಗೆದುಕೊಂಡಿದೆ. ಗ್ಯಾರಂಟಿ ಬಗ್ಗೆ ಸಾಧನರ ಎಂದು ಬಿಂಬಿಸಿಕೊಂಡಿದೆ. ಮತ್ತೊಂದು ಕಡೆ ರಾಜ್ಯದ ಜನರಿಗೆ ಬರೆ ಎಳೆಯುತ್ತಿದೆ. ಲೋಕಸಭಾ ಚುನಾವಣೆಯ ಬಳಿಕ ಪೆಟ್ರೋಲ್-ಡಿಸೇಲ್ ತೆರಿಗೆ ಹೆಚ್ಚಿಸಿದೆ. ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಬರಗಾಲದಲ್ಲಿ ರಾಜ್ಯ ಸರ್ಕಾರದ ಈ ಕೆಟ್ಟ ನಡವಳಿಕೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದ್ದು, ಬರುವ ಶುಕ್ರವಾರ ಕೂಡ ಮತ್ತೊಂದು ಹೋರಾಟ ರೂಪಿಸುತ್ತೇವೆ. ನೆರೆಯ ರಾಜ್ಯಗಳಲ್ಲಿ ನಮ್ಮ ರಾಜ್ಯಕ್ಕಿಂತ ದರ ಹೆಚ್ಚಿದೆ ಎಂದು ಸಿಎಂ ಹೇಳಿದ್ದಾರೆ. ಕೂಡಲೇ ಈ ಆದೇಶವನ್ನು ಕೈಬಿಟ್ಟು ಹಿಂದೆ ಸರಿಯಬೇಕು ಎಂದು ನಾನು ಆಗ್ರಹಿಸುತ್ತೇನೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…