ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದಾಗಿ ಜನ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ವಾಹನ ಸವಾರರಂತು ಪೆಟ್ರೋಲ್- ಡಿಸೇಲ್ ಬೆಲೆಯಲ್ಲಂತು ಬ್ಯಾಕ್ ಟು ಬ್ಯಾಕ್ ಏರಿಕೆಯಾಗುತ್ತಲೆ ಇದೆ. ಇದೀಗ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ.
ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆಯ ರಾಷ್ಟ್ರಗಳು ತೈಲ ಉತ್ಪಾದನೆ ಕಡಿಮೆ ಮಾಡಲು ಮುಂದಾಗಿವೆ. ಹೀಗಾಗಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತದೆ. ಏಪ್ರಿಲ್ 2 ರಂದು ನಡೆದ ಸಭೆಯಲ್ಲಿ ಮಿತ್ರರಾಷ್ಟ್ರಗಳು 1.16 ಮಿಲಿಯನ್ ಬ್ಯಾರೆಲ್ ಗಳಷ್ಟು ತೈಲ ಉತ್ಪಾದನೆ ಕಡಿಮೆಗೊಳಿಸಲು ನಿರ್ಧರಿಸಿದೆ.
ದೇಶದ ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಪುಣೆ, ಹೈದ್ರಾಬಾದ್ ಸೇರಿದಂತೆ ಇತರೆ ರಾಜ್ಯಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಹತ್ತು ತಿಂಗಳಿನಿಂದ ಕೇಂದ್ರ ಸರ್ಕಾರ ಯಥಾಸ್ಥಿತಿ ಕಾಪಾಡಿಕೊಂಡು ಬಂದಿದೆ. ಈಗ OPEC ರಾಷ್ಟ್ರಗಳು ತೆಗೆದುಕೊಳ್ಳುವ ನಿರ್ಧಾರದ ಮೇಲೆ ಭಾರತದ ತೈಲ ದರ ಅವಲಂಬಿಸಿದೆ.