ನೇಪಾಳ : ಕಠ್ಮಂಡುವಿನಿಂದ ಸುಮಾರು 72 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಇಂದು(ಭಾನುವಾರ) ಬೆಳಗ್ಗೆ ನೇಪಾಳದ ಪೋಖರಾದಲ್ಲಿ ಪತನಗೊಂಡಿದೆ ಎಂದು ಯೇತಿ ಏರ್‌ಲೈನ್ಸ್ ತಿಳಿಸಿದೆ.
ಕನಿಷ್ಠ 16 ಮೃತ ದೇಹಗಳು ಪತ್ತೆಯಾಗಿವೆ ಎಂದು ನೇಪಾಳಿ ಮಾಧ್ಯಮಗಳು ವರದಿ ಮಾಡಿವೆ. ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು.
ಯೇತಿ ಏರ್‌ಲೈನ್ಸ್ ನಿರ್ವಹಿಸುತ್ತಿದ್ದ ಅವಳಿ-ಎಂಜಿನ್ ಎಟಿಆರ್ 72 ವಿಮಾನವು ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಹೊರಟಿತ್ತು ಎಂದು ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಅವಶೇಷಗಳಲ್ಲಿ ಬೆಂಕಿ ಹೊತ್ತಿಕೊಂಡಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ (CAAN) ಪ್ರಕಾರ, ಯೇತಿ ಏರ್‌ಲೈನ್ಸ್‌ನ 9N-ANC ATR-72 ವಿಮಾನವು ಕಠ್ಮಂಡುವಿನಿಂದ ಬೆಳಿಗ್ಗೆ 10:33 ಕ್ಕೆ ಹೊರಟಿತ್ತು.
ಪೋಖರಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ, ಹಳೆಯ ವಿಮಾನ ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣದ ನಡುವಿನ ಸೇಟಿ ನದಿಯ ದಡದಲ್ಲಿ ವಿಮಾನ ಪತನಗೊಂಡಿದೆ.
ವಿಮಾನ ಪತನವಾಗುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ರಕ್ಷಣಾ ಕಾರ್ಯಕರ್ತರು ಅದನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…