ಇಂಡಿಯನ್ ಪ್ರೀಮಿಯರ್ ಲೀಗ್ 2026ರ 50ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಭೇಟಿಯಾಗಿದ್ದು, ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿತ್ತು.ರಜತ್ ಪಾಟಿದಾರ್ ನಾಯಕತ್ವದಲ್ಲಿ ಆರ್‌ಸಿಬಿ ಉತ್ತಮ ಫಾರ್ಮ್‌ನಲ್ಲಿ ಇದೆ. ಆಡಿದ 9 ಪಂದ್ಯಗಳಲ್ಲಿ 6 ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.
ಇತ್ತ ಲಕ್ನೋ ತಂಡ 9ರಲ್ಲಿ 7 ಸೋಲು ಕಂಡು ಅಂಕಪಟ್ಟಿಯ ಕೊನೆಯ ಸ್ಥಾನದಲ್ಲಿದ್ದು, ಪ್ಲೇಆಫ್ ಪೈಪೋಟಿಯಿಂದ ಬಹುತೇಕ ಹೊರಬಿದ್ದಂತಾಗಿದೆ. ಹೀಗಾಗಿ ಲಕ್ನೋಗೆ ಉಳಿದ ಪಂದ್ಯಗಳು ಗೌರವದ ಹೋರಾಟವಾಗಿದ್ದರೆ, ಆರ್‌ಸಿಬಿಗೆ ಮೊದಲ ಎರಡು ಸ್ಥಾನಕ್ಕಾಗಿ ಈ ಪಂದ್ಯ ಬಹಳ ಮುಖ್ಯವಾಗಿದೆ.ಈ ಪಂದ್ಯ ಮೇ 6ರಂದು ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದ್ದು, ಸಂಜೆ 7:30ಕ್ಕೆ ಆರಂಭವಾಗಲಿದೆ. ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ. ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿಗಳಲ್ಲಿ ಹಾಗೂ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರವಾಗಿ ವೀಕ್ಷಿಸಬಹುದು.ಎರಡೂ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದ್ದು, ಮತ್ತೊಂದು ರೋಚಕ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











