Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಎಂ ಕಿಸಾನ್ ಇ-ಕೆವೈಸಿ ಕಡ್ಡಾಯ

---Advertisement---

ಚಿತ್ರದುರ್ಗ. ಆ.20: ಪಿ.ಎಂ.ಕಿಸಾನ್ ಯೋಜನೆಯಡಿ ನಕಲಿ ಫಲಾನುಭವಿಗಳನ್ನು ತಡೆದು, ಪಾರದರ್ಶಕವಾಗಿ ಹಣ ಜಮೆ ಮಾಡಲು ಹಾಗೂ ಮುಂದಿನ ಕಂತಿನ ಹಣ ಪಡೆಯಲು ಕೇಂದ್ರ ಸರ್ಕಾರ ಬಯೋಮೆಟ್ರಿಕ್ ಫೇಸ್ ಆಧಾರಿತ ಇ-ಕೆವೈಸಿ ಕಡ್ಡಾಯಗೊಳಿಸಿದೆ.

ಇ-ಕೆವೈಸಿ ಮಾಡಿಸದಿದ್ದರೆ ಮುಂದಿನ ಕಂತಿನ ಹಣದಿಂದ ವಂಚಿತರಾಗಬೇಕಾಗುತ್ತದೆ. ಯೋಜನೆಯ 24ನೇ ಕಂತಿನ ಹಣ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಕೇಂದ್ರದ ಯೋಜನೆಯಡಿ ಪ್ರತಿ 4 ತಿಂಗಳಿಗೊಮ್ಮೆ 2,000 ರೂ. ನಂತೆ ವಾರ್ಷಿಕವಾಗಿ 3 ಕಂತುಗಳಲ್ಲಿ 6,000 ರೂ. ನೇರ ನಗದು ವರ್ಗಾವಣೆ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ.

ನೇರ ನಗದು ವರ್ಗಾವಣೆ ಮೂಲಕ ರೈತರ ಖಾತೆಗೆ ಹಣ ಸೇರುತ್ತಿದ್ದರೂ ಈ ಬಾರಿ ಕಂತು ಬಿಡುಗಡೆಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್‍ನ್ನು ಎನ್‍ಪಿಸಿಐ ಜತೆ ಲಿಂಕ್ ಮಾಡಿಸಿದ್ದರೂ ಈ ಸಲ ಪ್ರತಿಯೊಬ್ಬ ಫಲಾನುಭವಿ ಬಯೋಮೆಟ್ರಿಕ್  ಅಥವಾ ಫೇಸ್ ಆಧಾರಿತ ಇ-ಕೆವೈಸಿ ಮಾಡಿಸಬೇಕು. ಈ ಮೂಲಕ ಮೃತರನ್ನು ಕೈಬಿಟ್ಟು ಅರ್ಹ ಫಲಾನುಭವಿಗಳ ಪತ್ತೆಗೆ  ಸರಕಾರ ಮುಂದಾಗಿದೆ.

 

ಈ ಹಿಂದೆ ರೈತರು ಆಧಾರ್ ಒಟಿಪಿ ಆಧಾರಿತ ಇ-ಕೆವೈಸಿ ಮಾಡಿಸುತ್ತಿದ್ದರು. ಇದರಿಂದ ಮೃತಪಟ್ಟ ಖಾತೆದಾರರ  ಅಥವಾ ಫಲಾನುಭವಿಗಳ ಖಾತೆಗೂ ಹಣ ವರ್ಗಾವಣೆಕೊಂಡ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೀಗಾಗಿ ಕೇಂದ್ರ ಸರ್ಕಾರ ಬಯೋಮೆಟ್ರಿಕ್ ಅಥವಾ ಫೇಸ್ ಆಧಾರಿತ ಇ-ಕೆವೈಸಿಗೆ ಮಾತ್ರ ಅವಕಾಶ ನೀಡಿ, ಒಟಿಪಿ ಆಧಾರಿತ ಇ-ಕೆವೈಸಿಗೆ ಕಡಿವಾಣ ಹಾಕಿದೆ.

 

ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 1,51,693 ಫಲಾನುಭವಿಗಳಿದ್ದು, ಈ ಪೈಕಿ 1,51,498 ರೈತರ ಇ-ಕೆವೈಸಿ ಬಾಕಿ ಉಳಿದಿದೆ. ತಾಲ್ಲೂಕುವಾರು ಬಾಕಿ ವಿವರ ಇಂತಿದೆ. ಚಿತ್ರದುರ್ಗದಲ್ಲಿ 31,736, ಚಳ್ಳಕೆರೆಯಲ್ಲಿ 33,846, ಹಿರಿಯೂರಿನಲ್ಲಿ 24,875, ಹೊಳಲ್ಕೆರೆಯಲ್ಲಿ 25,895, ಹೊಸದುರ್ಗದಲ್ಲಿ 24,023 ಹಾಗೂ ಮೊಳಕಾಲ್ಮೂರಿನಲ್ಲಿ 11,123 ಫಲಾನುಭವಿಗಳ ಇ-ಕೆವೈಸಿ ಬಾಕಿ ಇದೆ.
ರೈತರು ಸಾಮಾನ್ಯ ಸೇವಾ ಕೇಂದ್ರಗಳು, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ನೀಡಿ ಇ-ಕೆವೈಸಿ ಪೂರ್ಣಗೊಳಿಸಬಹುದು. ಮುಖ ದೃಢೀಕರಣ ಆಧಾರಿತ ಇ-ಕೆವೈಸಿ ಮಾಡಿಸಿಕೊಳ್ಳಲು ಪ್ರತಿ ಗ್ರಾಮದ ವಿಲ್ಲೇಜ್ ನೋಡಲ್ ಆಫೀಸರ್‍ಗಳಾದ ಕೃಷಿ ಸಖಿ, ಪಶು ಸಖಿ ಹಾಗೂ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಹಾಗೂ ರೈತರು ಸ್ವತಃ ಪಿಎಂ ಕಿಸಾನ್ ಮೊಬೈಲ್ ಅಪ್ಲಿಕೇಶನ್ ಮೂಲಕ ಇ-ಕೆವೈಸಿ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಮೊಬೈಲ್ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿರುತ್ತದೆ. ಹಾಗೂ ಈhttps://play.google.com/store/apps/details?id=com.nic.project.pmkisan
ಲಿಂಕ್ ಬಳಸಿ ರೈತರು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ತಿಳಿಸಿದ್ದಾರೆ.
==========

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now