ಚಿತ್ರದುರ್ಗ,(ಜನವರಿ.06) : ಪಿಎಂ ಕಿಸಾನ್ ಯೋಜನೆಯಡಿ ನಿಯತಕಾಲಿಕವಾಗಿ ಫಲಾನುಭವಿಗಳ ಅರ್ಹತೆ ಪರಿಶೀಲಿಸಿ ಖಾತ್ರಿ ಪಡಿಸುವುದು ಅವಶ್ಯಕವಾಗಿರುತ್ತದೆ.
ಆದ್ದರಿಂದ fruitspmk.karnataka.gov.in ನಲ್ಲಿ ನೋಂದಾಣಿಯಾಗಿರುವ ರೈತ ಫಲಾನುಭವಿಗಳು ನವೀಕೃತ ಭೂಮಿ ದತ್ತಾಂಶ ಮತ್ತು ತಂತ್ರಾಂಶ ಆಧಾರಿತ ಪರಿಶೀಲನೆ ನಡೆಸಿ ಕೆಲ ರೈತರ ವಿವರಗಳನ್ನು ಮರು ಪರಿಶೀಲನೆ ಮಾಡುವುದು ಅವಶ್ಯಕವಾಗಿದೆ. ಆದ್ದರಿಂದ ರೈತರ ವಿವರಗಳನ್ನು ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಹ ದಾಖಲೆಗಳನ್ನು ಸಲ್ಲಿಸಿ ಮುಂದಿನ ಪಿಎಂ ಕಿಸಾನ್ ಯೋಜನೆಯ ಆರ್ಥಿಕ ಸಹಾಯವನ್ನು ಪಡೆಯಬಹುದು.
ಪಿಎಂ ಕಿಸಾನ್ ಯೋಜನೆಯ ಆರ್ಥಿಕ ಸಹಾಯ ಪಡೆಯಲು ಜಮೀನಿನ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ಮಾಡತಕ್ಕದ್ದು.
ಪಿಎಂಕೆ ಖಾತೆಯನ್ನು ಹೊಂದಿರುವವರು ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಲು ಸೂಚಿಸಿದೆ.
ಫಲಾನುಭವಿಗಳು http://pmkisan.gov.in ಗೆ ಭೇಟಿ ನೀಡಿ ಆಧಾರ್ ಸಂಖ್ಯೆಯನ್ನು ಮೊಬೈಲ್ ಸಂಖ್ಯೆಗೆ ನಮೂದಿಸಬೇಕು. ಬರುವ ಒಟಿಪಿ ಸಂಖ್ಯೆಗೆ ನಮೂದಿಸಿ ಉಚಿತವಾಗಿ ಇ-ಕೆವೈಸಿ ಮಾಡಿಸಬಹುದು. ಜೊತೆಗೆ ರೈತರು ಹತ್ತಿರದ ಸಾಮಾನ್ಯ ಸೇವಾ ಸಿಂಧು ಕೇಂದ್ರಕ್ಕೆ ಭೇಟಿ ನೀಡಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳು ನಮೂದಿಸಿ ಇ-ಕೆವೈಸಿ ಮಾಡಬಹುದು. ಈ ಪ್ರಕ್ರಿಯೆಗಾಗಿ ಸಿಎಸ್‍ಸಿ ಕೇಂದ್ರದವರಿಗೆ ಶುಲ್ಕ ಪಾವತಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಡಾ. ಪಿ.ರಮೇಶ್‍ಕುಮಾರ್ ತಿಳಿಸಿದ್ದಾರೆ.