ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20 ರಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವನ್ನು ಬಿಡುಗಡೆ ಮಾಡಿದ್ದಾರೆ. 23ನೇ ಕಂತಿನ ಅಡಿಯಲ್ಲಿ ಪ್ರತಿಯೊಬ್ಬ ಫಲಾನುಭವಿಯ ಖಾತೆಗೆ ತಲಾ 2,000 ರೂಪಾಯಿಗಳನ್ನು ಜಮೆ ಮಾಡಲಾಗಿದೆ.
2026-27ರ ಹಣಕಾಸು ವರ್ಷದ ಮೊದಲ ಕಂತಿನ ಹಣವನ್ನು ಕೇಂದ್ರ ಸರ್ಕಾರ ರೈತರ ಖಾತೆಗಳಿಗೆ ವರ್ಗಾಯಿಸಿದೆ. ಪಶ್ಚಿಮ ಬಂಗಾಳದ ತಾರಕೇಶ್ವರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೋದಿ ಅವರು ಈ ಹಣವನ್ನು ಬಿಡುಗಡೆ ಮಾಡಿದರು.

ದೇಶಾದ್ಯಂತ 9.44 ಕೋಟಿಗೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು 18,880 ಕೋಟಿಗೂ ಅಧಿಕ ರೂಪಾಯಿಗಳನ್ನು ಜಮೆ ಮಾಡಲಾಗಿದ್ದು, ಈಗಾಗಲೇ ಈ ಹಣ ಫಲಾನುಭವಿಗಳ ಕೈಸೇರಿದೆ. ಪಿಎಂ ಕಿಸಾನ್ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ 6,000 ರೂ. ಆರ್ಥಿಕ ನೆರವು ನೀಡಲಾಗುತ್ತಿದ್ದು, ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ. ನಂತೆ ಮೂರು ಕಂತುಗಳಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುತ್ತದೆ.
ಈ ತಪ್ಪುಗಳಾಗಿದ್ದರೆ ಹಣ ಬರುವುದಿಲ್ಲ..
ಒಂದು ವೇಳೆ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದು, ನಿಮಗಿನ್ನೂ ಹಣ ಬಂದಿಲ್ಲವೆಂದರೆ ನೀವು ದೂರು ದಾಖಲಿಸಬಹುದು. ಪಿಎಂ ಕಿಸಾನ್ ಹಣ ಬಾರದಿರಲು ಹಲವು ಕಾರಣಗಳಿರಬಹುದು. ಇ-ಕೆವೈಸಿ (e-KYC) ಪೂರ್ಣಗೊಳಿಸದಿರುವುದು, ಭೂ ದಾಖಲೆಗಳ ಪರಿಶೀಲನೆ ಆಗದಿರುವುದು, ಅಥವಾ ಅರ್ಜಿಯಲ್ಲಿ ತಪ್ಪು ವೈಯಕ್ತಿಕ ಹಾಗೂ ಬ್ಯಾಂಕ್ ವಿವರಗಳನ್ನು ನೀಡಿರುವುದರಿಂದ ಹಣ ಸ್ಥಗಿತಗೊಂಡಿರುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಸಮಸ್ಯೆ ಏನೆಂಬುದನ್ನು ತಿಳಿದುಕೊಂಡು ಅದನ್ನು ಸರಿಪಡಿಸಿಕೊಂಡರೆ ತಕ್ಷಣವೇ ನಿಮ್ಮ ಖಾತೆಗೆ ಹಣ ಜಮೆಯಾಗುತ್ತದೆ. ಹಾಗಾದರೆ ದೂರು ನೀಡುವುದು ಹೇಗೆ ಎಂಬ ವಿವರ ಇಲ್ಲಿದೆ.
ಹಣ ಬಾರದಿದ್ದರೆ ಏನು ಮಾಡಬೇಕು?
ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದೂ ಖಾತೆಗೆ ಹಣ ಬಾರದಿದ್ದರೆ, ನೀವು ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಬಹುದು:
ಟೋಲ್-ಫ್ರೀ ಸಂಖ್ಯೆಗೆ ಕರೆ ಮಾಡಿ: ಹಣ ಬಾರದಿರಲು ಕಾರಣ ತಿಳಿಯಲು ನೀವು 18001801551 ಟೋಲ್-ಫ್ರೀ ಸಂಖ್ಯೆಗೆ ಕರೆ ಮಾಡಬಹುದು. ಅಲ್ಲಿನ ಸಿಬ್ಬಂದಿ ನಿಮ್ಮ ವಿವರಗಳನ್ನು ಪರಿಶೀಲಿಸಿ ಸಮಸ್ಯೆಯನ್ನು ತಿಳಿಸುತ್ತಾರೆ.
ಸಿಎಸ್ ಸಿ ಕೇಂದ್ರಕ್ಕೆ ಭೇಟಿ ನೀಡಿ: ಇ-ಕೆವೈಸಿ ಅಥವಾ ಅರ್ಜಿ ಅಪ್ಡೇಟ್ ಮಾಡಲು ನಿಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (CSC) ಭೇಟಿ ನೀಡಬಹುದು.
ಸಿಪಿಗ್ರಾಮ್ಸ್ (CPGRAMS) ಪೋರ್ಟಲ್: ನೀವು ಆನ್ ಲೈನ್ ನಲ್ಲಿ CPGRAMS ಪೋರ್ಟಲ್ ಮೂಲಕವೂ ದೂರು ದಾಖಲಿಸಬಹುದು. ಇದಕ್ಕೆ 50 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ನಿಮ್ಮ ವಿವರಗಳನ್ನು ಸಲ್ಲಿಸಿ ದೂರು ನೀಡಿದ ನಂತರ, ಅಧಿಕಾರಿಗಳು ಅದನ್ನು ಪರಿಶೀಲಿಸಿ ಸಮಸ್ಯೆಯನ್ನು ಬಗೆಹರಿಸುತ್ತಾರೆ.
ಇದೇ ವೇಳೆ, ಅರ್ಹತೆ ಇಲ್ಲದಿದ್ದರೂ ತಪ್ಪು ಮಾಹಿತಿ ನೀಡಿ ಪಿಎಂ ಕಿಸಾನ್ ಹಣ ಪಡೆಯುತ್ತಿದ್ದ ಹಲವರನ್ನು ತನಿಖೆಯ ನಂತರ ಫಲಾನುಭವಿಗಳ ಪಟ್ಟಿಯಿಂದ ಸರ್ಕಾರ ಕೈಬಿಟ್ಟಿದೆ ಎಂಬುದು ಗಮನಾರ್ಹ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















