ಚಿತ್ರದುರ್ಗ, (ಮೇ 12): ಪಿ.ಎಂ.ಕಿಸಾನ್ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ನೀಡಲಾಗುವ ರೂ.2,000/- ನಗದು ಹಣದ 11ನೇ ಕಂತು ಶೀಘ್ರವೇ ರೈತರ ಖಾತೆಗೆ ತಲುಪಲಿದೆ. ಈಗಾಗಲೇ 2,000/-ದಂತೆ 10 ಕಂತುಗಳಲ್ಲಿ ಅರ್ಹ ರೈತರು ಹಣವನ್ನು ಪಡೆದಿದ್ದಾರೆ. ಈ ಯೋಜನೆಯಡಿ ರೈತರು ವಾರ್ಷಿಕ ರೂ.6,000/- ಗಳನ್ನು ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದಂತೆ ನೇರವಾಗಿ ಅವರ ಖಾತೆಗೆ ಜಮೆಯಾಗುತ್ತಿದೆ.
ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿರುತ್ತದೆ. ತಪ್ಪದೇ ಮೇ 31ರೊಳಗೆ ಫಲಾನುಭವಿ ರೈತರು ಇ-ಕೆವೈಸಿಯನ್ನು ಮಾಡಿಸಬೇಕು.
ಫಲಾನುಭವಿಗಳು pmkisan.gov.in ವೆಬ್‍ಸೈಟ್‍ಗೆ ಭೇಟಿ ನೀಡಿ, ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ “ಒಟಿಪಿ”ಯನ್ನು ನಮೂದಿಸಿ ಉಚಿತವಾಗಿ ಇ-ಕೆವೈಸಿ ಮಾಡಬಹದು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ “ಒಟಿಪಿ” ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.







GIPHY App Key not set. Please check settings