ಬೆಳಗಾವಿ: ನಾಳೆ ಪ್ರಧಾನಿ ಮೋದಿ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ರೈತರಿಗೂ ಹಣ ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರದಿಂದ ನೀಡುತ್ತಿರುವ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.
ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಎಂಟು ಸಾವಿರ ರೈತರಿಗೆ ಹದಿನಾರು ಸಾವಿರ ಕೋಟಿ ಹಣ ಬಿಡುಗಡೆ ಮಾಡಲಿದ್ದಾರೆ. ಹಣ ಬಂದಿದೆಯಾ ಇಲ್ಲವಾ ಎಂಬುದನ್ನು ಆಲ್ನೈನ್ ಮೂಲಕ ಪರಿಶೀಲನೆ ಮಾಡಿಕೊಳ್ಳಬಹುದು.
ಇನ್ನು ಈ ಯೋಜನೆಯನ್ನು ಕೇಂದ್ರ ಸರ್ಕಾರ 2019ರಲ್ಲಿ ಆರಂಭವಾಗಿತ್ತು. ಈ ಯೋಜನೆಯಡಿ ರೈತರಿಗೆ ಎರಡು ಸಾವಿರ ರೂಪಾಯಿ ನೀಡಲಾಗುತ್ತಿತ್ತು. ಈಗಾಗಲೇ ಹನ್ನೆರಡು ಕಂತುಗಳಲ್ಲಿ ಹಣವನ್ನು ನೀಡಲಾಗಿತ್ತು. ಇದೀಗ ಹದಿಮೂರನೇ ಕಂತಿನ ಹಣವನ್ನು ನಾಳೆ ಪ್ರಧಾನಿ ಮೋದಿ ನೀಡಲಿದ್ದಾರೆ.