Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಬೊಮ್ಮಾಯಿ ಅವರ ಆಡಳಿತ ಹೊಗಳಿದ ಪ್ರಧಾನಿ ಮೋದಿ

Facebook
Twitter
Telegram
WhatsApp

 

ಬೆಂಗಳೂರು: ನಗರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಬಳಿಕ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕರುನಾಡ ಜನತೆಗೆ ನನ್ನ ಪ್ರೀತಿಯ ನಮಸ್ಕಾರಗಳು. ಬೆಂಗಳೂರಿನ ಮಹಾಜನತೆಗೆ ವಿಶೇಷ ನಮಸ್ಕಾರಗಳು ಎಂದು ಕನ್ನಡದಲ್ಲಿ ಮಾತಾಡಿದ ಮೋದಿ, ಇಂದು ಮಹತ್ವದ ದಿನವಾಗಿದೆ ಎಂದಿದ್ದಾರೆ.

ಇವತ್ತು 27 ಸಾವಿರ ಕೋಟಿ ವೆಚ್ಚದ ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ ಆಗಿದೆ. ಹಲವು ಯೋಜನೆಗಳ ಮೂಲಕ ಜನರ ಸೇವೆಗೆ ಅವಕಾಶ ಸಿಕ್ಕಿದೆ. ಇಲ್ಲಿಗೆ ಬರುವ ಮುಂಚೆ ಐಐಎಸ್ಸಿ, ಬೇಸ್ ವಿವಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೆ. ಬೆಂಗಳೂರಿನಲ್ಲಿ ಇದು ಕೊನೆಯ ಕಾರ್ಯಕ್ರಮ, ಇಲ್ಲಿಂದ ಮೈಸೂರಿಗೆ ಹೋಗ್ತೇನೆ. ರಾಜ್ಯದಲ್ಲಿ ಐದು ನ್ಯಾಷನಲ್ ಹೈವೇ ಯೋಜನೆಗಳು, ಏಳು ರೈಲು ಯೋಜನೆಗಳಿಗೆ ಚಾಲನೆ ಕೊಟ್ಟಿದ್ದೇವೆ. ಕರ್ನಾಟಕದಲ್ಲಿ ಹಲವು ಯೋಜನೆಗಳನ್ನು ಕಲ್ಪಿಸುವ ಯೋಜನೆಗಳಿಗೆ ಚಾಲನೆ ಕೊಟ್ಟಿರೋದು ನಮಗೆ ಸಂತೋಷ ತಂದಿದೆ.

ನಲವತ್ತು ವರ್ಷ ಚರ್ಚೆಯಲ್ಲಿದ್ದ ಈ ಯೋಜನೆ ಆರಂಭಿಸುವ ಪುಣ್ಯ ನಮಗೆ ಸಿಕ್ಕಿದೆ. ನಲವತ್ತು ವರ್ಷ ಕಮ್ಮಿ ಅವಧಿ ಅಲ್ಲ. ಈ ಸುವರ್ಣ ಅವಕಾಶ ನಮಗೆ ಸಿಕ್ಕಿದೆ. ಸಬರ್ಬನ್ ರೈಲು ಯೋಜನೆ ಥರವೇ ಬೆಂಗಳೂರು ರಿಂಗ್ ರಸ್ತೆ ಅಗಲೀಕರಣ ಯೋಜನೆ. ಇದರಿಂದ ಸಂಚಾರ ದಟ್ಟಣೆ ಕಮ್ಮಿ ಆಗಲಿದೆ. ಬೆಂಗಳೂರು ಲಕ್ಷಾಂತರ ಜನರಿಗೆ ಕನಸಿನ ನಗರಿ. ಬೆಂಗಳೂರಿನ ಅಭಿವೃದ್ಧಿ ‌ಲಕ್ಷಾಂತರ ಕನಸುಗಳ ವಿಕಾಸ. ಕೇಂದ್ರದಿಂದ ಬೆಂಗಳೂರು ಅಭಿವೃದ್ಧಿಗೆ ಇನ್ನಷ್ಟು ಉತ್ತೇಜನ ಕೊಡಲಾಗ್ತಿದೆ. ಬೆಂಗಳೂರಿನ ಸಂಚಾರ ದಟ್ಟಣೆ ಇಳಿಸಲು ಹಲವು ಯೋಜನೆ ಕೊಡಲಾಗಿದೆ

ಸಂಚಾರ ದಟ್ಡಣೆಯಿಂದ ಮುಕ್ತಿ ಕೊಡಲು ರೈಲು, ರಸ್ತೆ, ಮೂಲಸೌಕರ್ಯ ಹೆಚ್ಚಿಸಿದ್ದೇವೆ. ಮೂಲಸೌಕರ್ಯ ಕೊಡುವ ಕೆಲಸವನ್ನು ನಮ್ಮ ಡಬಲ್ ಇಂಜಿನ್ ಸರ್ಕಾರ ಮಾಡಿದೆ. ಸಬರ್ಬನ್ ಯೋಜನೆ ಬಗ್ಗೆ 40 ವರ್ಷದಿಂದ ಚರ್ಚೆ ಮಾತ್ರ ನಡೀತಿತ್ತು. ನಾವು ಈಗ ನಿಮ್ಮ ಕನಸನ್ನು ನನಸು ಮಾಡಿದ್ದೇವೆ. ಹದಿನಾರು ವರ್ಷದವರೆಗೆ ಸಬರ್ಬನ್ ರೈಲು ಯೋಜನೆ ನೆನೆಗುದಿಗೆ ಬಿದ್ದಿತ್ತು. ಬೆಂಗಳೂರಿಗರ ಎಲ್ಲ ಕನಸುಗಳನ್ನು ನನಸು ಮಾಡಲು ನಾವು ಬದ್ಧರಾಗಿದ್ಧೇವೆ. ಕರ್ನಾಟಕದಲ್ಲಿ 1200 ಕಿ.ಮೀ ಗೂ ಹೆಚ್ಚಿನವರೆಗೆ ವಿವಿಧ ರೈಲು ಕಾಮಗಾರಿ ಮಾಡಲಾಗಿದೆ.

ಕೊರೋನಾ ವೇಳೆ ಬೆಂಗಳೂರಿನಲ್ಲಿ ಇರುವ ನಮ್ಮ ಯುವ ಸಮೂಹ ಉತ್ತಮ ಸೇವಾಕಾರ್ಯ ಮಾಡಿದ್ದಾರೆ. ಬೆಂಗಳೂರಿಗೆ ಜನರ ಮನಸ್ಥಿತಿ ಬದಲಾಯಿಸುವ ಶಕ್ತಿ ಇದೆ. ಜಗತ್ತಿನ‌ ಮುಂಚೂಣಿ ನಗರಗಳಲ್ಲಿ ಬೆಂಗಳೂರು ಒಂದು. ಉದ್ಯೋಗ ಸೃಷ್ಟಿ, ನವ್ಯೋದ್ಯಮಗಳ ಸೃಷ್ಟಿ‌‌ ಮಾಡುವ ನಗರ ಎಂದಿದ್ದಾರೆ.

ಇದೆ ವೇಳೆ ರಾಜ್ಯದ ಸಿಎಂ ಬೊಮ್ಮಾಯಿ ಅವರನ್ನು ಮೋದಿ ಹೊಗಳಿದ್ದಾರೆ. ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಕರ್ನಾಟಕ ವಿಕಾಸ ಆಗ್ತಿದೆ ಎಂದಜ ಬೊಮ್ಮಾಯಿ ಆಡಳಿತಕ್ಕೆ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!