ಜೂ.20ರಂದು ರಾಜ್ಯಕ್ಕೆ ಪ್ರಧಾನಿ ಆಗಮನ..ಬಿಜೆಪಿಯಿಂದ ತಯಾರಿ..!

suddionenews
1 Min Read

ಬೆಂಗಳೂರು: ಜೂನ್ 20ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈಗಾಗಿ ಬಿಜೆಪಿ ಅಂದಿನ ಕಾರ್ಯಕ್ರಮಕ್ಕೆ ಎಲ್ಲಾ ತಯಾರಿ ಮಾಡಿಕೊಳ್ಳಲು ರೆಡಿಯಾಗಿದೆ. ಇದರ ತಯಾರಿ ಹಿನ್ನೆಲೆ ಇಂದು ಬಿಜೆಪಿ ಅರಮನೆ ಮೈದಾನದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿದೆ. ಪೂರ್ವ ಸಿದ್ಧತಾ ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ‘ಪ್ರಧಾನಿಗಳು ಬಹಳ ದಿನಗಳ ನಂತರ ರಾಜ್ಯಕ್ಕೆ ಬರ್ತಿದ್ದಾರೆ. ಅವರು ಬೇರೆ ರಾಜ್ಯಗಳಿಗೆ ಹೋದಾಗ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ನಂತರ ಪ್ರವಾಸ ಕೈಗೊಂಡಿದ್ದಾರೆ. ಬಿಜೆಪಿ ಇಲ್ಲದ ಕಡೆಯೂ ದೊಡ್ಡ ಬೆಂಬಲ ಅವರಿಗೆ ಸಿಕ್ಕಿದೆ. ಮೊನ್ನೆ ತಮಿಳುನಾಡಿಗೆ ಹೋಗಿದ್ದಾಗ ಎಷ್ಟೊಂದು ಜನರು ಬೆಂಬಲ ನೀಡಿದ್ರೂ ಎಂಬುದನ್ನು ನೋಡಿದ್ದೇವೆ.

ಇದೇ ರೀತಿ ಹಲವು ರಾಜ್ಯಗಳಲ್ಲೂ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಾರ್ವಜನಿಕ ಸಭೆಗೆ 50 ರಿಂದ 60 ಸಾವಿರ ಜನ ಸೇರಿಸುವ ಗುರಿ ಹೊಂದಿದ್ದೇವೆ. ಅಲ್ಲಿ ಜನರಿಗೆ ಸರ್ಕಾರದಿಂದ ಅಗತ್ಯ ವ್ಯವಸ್ಥೆ ಆಗುತ್ತದೆ. ಆದರೆ ಜನರನ್ನು ಕರೆಸುವುದು ನಿಮ್ಮ ಜವಬ್ದಾರಿ. ಹೀಗಾಗಿ ಜನರನ್ನು ಸೇರಿಸಿ ಕಾರ್ಯಕ್ರಮ ಯಶಸ್ವಿ ಮಾಡಬೇಕು. ಮತ್ತೆ ಎಲ್ಲಾದರೂ ಒಂದು ಕಡೆ ರೋಡ್ ಶೋಗೂ ಸಿದ್ದತೆ ಆಗಬೇಕು.

18ನೇ ತಾರೀಖಿನ ಒಳಗೆ ಎಲ್ಲ ರೀತಿಯ ಸಿದ್ದತೆ ಆಗಬೇಕು. ಪ್ರಧಾನಿಗಳ ಕಾರ್ಯಕ್ರಮ ಗಂಭೀರವಾಗಿ ತೆಗೆದುಕೊಂಡು, ಶ್ರಮ ವಹಿಸಿ ಜನರನ್ನು ಸೇರಿಸಬೇಕು ಎಂದು ಬೆಂಗಳೂರು ಪಕ್ಷದ ನಾಯಕರಿಗೆ ಸಿಎಂ ಬೊಮ್ಮಾಯಿ ಕರೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *