Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದಿನಿಂದ ಪ್ರಧಾನಿ ಮೋದಿ 3 ದೇಶಗಳ ಪ್ರವಾಸ; ಇಂಡೋನೇಷ್ಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಭೇಟಿ

---Advertisement---

ದೆಹಲಿ.ಜುಲೈ.06: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ದೇಶಗಳ ಆರು ದಿನಗಳ ಪ್ರವಾಸಕ್ಕೆ ಚಾಲನೆ ನೀಡಿದ್ದಾರೆ. ಈ ಭೇಟಿಯ ಅವಧಿಯಲ್ಲಿ ಪ್ರಧಾನಿಯವರು ಮೂರೂ ದೇಶಗಳ ಪ್ರಮುಖ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ, ಪ್ರಮುಖ ಕ್ಷೇತ್ರಗಳಲ್ಲಿನ ಸಹಕಾರದ ಪರಿಶೀಲನೆ, ಉದ್ಯಮಿಗಳೊಂದಿಗೆ ಸಭೆ ಮತ್ತು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಇತ್ತೀಚೆಗಷ್ಟೇ ಮೂರು ದಿನಗಳ ಸೆಶೆಲ್ಸ್ ಪ್ರವಾಸ ಮುಗಿಸಿ ಜೂನ್ 29 ರಂದು ಭಾರತಕ್ಕೆ ಮರಳಿದ್ದ ಪ್ರಧಾನಿ ಮೋದಿ, ಅಲ್ಲಿನ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನಿ ಅವರೊಂದಿಗೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಿದ್ದರು. ಅದಾದ ಬೆನ್ನಲ್ಲೇ ಈಗ ಈ ಮೂರು ದೇಶಗಳ ಪ್ರವಾಸ ಕೈಗೊಂಡಿದ್ದಾರೆ.

ಅಧ್ಯಕ್ಷ ಪ್ರಬೋವೊ ಸುಬಿಯಾಂತೊ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರ ಪ್ರವಾಸವು ಜುಲೈ 6 ರಿಂದ 8 ರವರೆಗೆ ಇಂಡೋನೇಷ್ಯಾದಿಂದ ಆರಂಭವಾಗಲಿದೆ. ಇದು ಪ್ರಧಾನಿ ಮೋದಿಯವರ ನಾಲ್ಕನೇ ಇಂಡೋನೇಷ್ಯಾ ಭೇಟಿಯಾಗಿದೆ. ವಿಶೇಷವೆಂದರೆ, ಮೇ 2018 ರಲ್ಲಿ ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಂಬಂಧವನ್ನು ‘ಸಮಗ್ರ ಕಾರ್ಯತಂತ್ರದ ಪಾಲುದಾರಿಕ್ಯೆ’ ಮಟ್ಟಕ್ಕೆ ಕೊಂಡೊಯ್ದ ನಂತರ ನಡೆಯುತ್ತಿರುವ ಅವರ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ.

ಮುಂದಿನ ಕೆಲವು ದಿನಗಳಲ್ಲಿ ನಾನು ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ. ಈ ಭೇಟಿಗಳ ಮುಖ್ಯ ಉದ್ದೇಶ ಪ್ರಮುಖ ಅಭಿವೃದ್ಧಿ ಪಾಲುದಾರರೊಂದಿಗೆ ಆರ್ಥಿಕ ಮತ್ತು ಕಾರ್ಯತಂತ್ರದ ಸಹಕಾರವನ್ನು ಹೆಚ್ಚಿಸುವುದಾಗಿದೆ. ಜೊತೆಗೆ ನಮ್ಮ ದೇಶದ ಯುವಕರಿಗೆ ಮುಂಬರುವ ದಿನಗಳಲ್ಲಿ ಹೆಚ್ಚಿನ ಅವಕಾಶಗಳು ಸಿಗುವಂತೆ ಮಾಡುವುದು ಇದರ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸರ್ಕಾರಿ ಪ್ರಕಟಣೆಯ ಪ್ರಕಾರ, ಪ್ರಧಾನಿ ಮೋದಿ ಅವರು ಅಧ್ಯಕ್ಷ ಪ್ರಬೋವೊ ಅವರೊಂದಿಗೆ ದ್ವಿಪಕ್ಷೀಯ ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಜಕಾರ್ತಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ, ಆನಂತರ ಯೋಗಕರ್ತಾಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿರುವ ‘ಪ್ರಂಬಾನನ್’ ದೇವಸ್ಥಾನದ ಸಂಕೀರ್ಣಕ್ಕೆ ಭೇಟಿ ನೀಡಲಿದ್ದಾರೆ. ಇದು ಉಭಯ ದೇಶಗಳ ನಡುವಿನ ಆಳವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ.

ಇಂಡೋನೇಷ್ಯಾ ಪ್ರವಾಸ ಮುಗಿದ ಬಳಿಕ, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಜುಲೈ 8 ರಿಂದ 10 ರವರೆಗೆ ಆಸ್ಟ್ರೇಲಿಯಾದ ಮೆಲ್ಬೋರ್ನ್‌ಗೆ ಭೇಟಿ ನೀಡಲಿದ್ದಾರೆ ಎಂದು ಸರ್ಕಾರ ತಿಳಿಸಿದೆ. ತದನಂತರ ಅವರು ನ್ಯೂಜಿಲೆಂಡ್‌ಗೂ ಪ್ರಯಾಣ ಬೆಳೆಸಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now