ಮೈಸೂರು.ಆಗಸ್ಟ್.1: ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.
ಇಂದು ಮೋದಿ ಅವರು ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯ ಪವಿತ್ರ ಸ್ಥಳದಲ್ಲಿ ₹45 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬೃಹತ್ ‘ಸ್ವಾಮಿ ವಿವೇಕಾನಂದ ಸ್ಮಾರಕ’ ಹಾಗೂ ‘ಸಾಂಸ್ಕೃತಿಕ ಯುವ ಕೇಂದ್ರ’ವನ್ನು ಪ್ರಧಾನಿಯವರು ಉದ್ಘಾಟಿಸಲಿದ್ದಾರೆ.

ಲೋಕಾರ್ಪಣಾ ಕಾರ್ಯಕ್ರಮದ ನಂತರ ಪ್ರಧಾನಿಯವರು ನಗರದ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಬಳಿಕ ಆಶ್ರಮದ ಪ್ರಾರ್ಥನಾ ಮಂದಿರದ ಆವರಣದಲ್ಲಿ ಆಯೋಜಿಸಲಾಗಿರುವ ವಿಶೇಷ ಸಭೆಯಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 6,000ಕ್ಕೂ ಹೆಚ್ಚು ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದ್ದು, ಭದ್ರತಾ ಹಿತದೃಷ್ಟಿಯಿಂದ ವಿಶೇಷ ಪ್ರವೇಶ ಪತ್ರ (Pass) ಕಡ್ಡಾಯಗೊಳಿಸಲಾಗಿದೆ.










