Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಶುಭ ಕೋರಿದ ಪ್ರಧಾನಿ ಮೋದಿ

---Advertisement---

ಸುದ್ದಿಒನ್,ಬೆಂಗಳೂರು,ಜೂನ್03: ಕರ್ನಾಟಕ ರಾಜಕಾರಣದಲ್ಲಿ ಇಂದು ಹೊಸದೊಂದು ಐತಿಹಾಸಿಕ ಅಧ್ಯಾಯ ಆರಂಭವಾಗಿದೆ. ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಲೋಕಭವನದ ಗಾಜಿನಮನೆಯಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರು ನೂತನ ಸಿಎಂಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಅತ್ಯಂತ ಅಪರೂಪದ ಹಾಗೂ ಭಾವನಾತ್ಮಕ ಕ್ಷಣಕ್ಕೆ ಇಂದಿನ ಕಾರ್ಯಕ್ರಮ ಸಾಕ್ಷಿಯಾಯಿತು. ರಾಜ್ಯದ ಇತಿಹಾಸದಲ್ಲೇ ಹಿಂದೆಂದೂ ಇಲ್ಲದ ರೀತಿಯಲ್ಲಿ ಎಲ್ಲಾ ಧರ್ಮಗಳ ಪೂಜ್ಯ ಸ್ವಾಮೀಜಿಗಳು ಹಾಗೂ ಧರ್ಮಗುರುಗಳನ್ನು ಏಕಕಾಲದಲ್ಲಿ ಆಹ್ವಾನಿಸಲಾಗಿತ್ತು. ಸರ್ವ ಧರ್ಮಗಳ ಪೀಠಾಧೀಶರ ದಿವ್ಯ ಸಮ್ಮುಖದಲ್ಲಿ ಹಾಗೂ ಮಂತ್ರಘೋಷಗಳ ನಡುವೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಗದ್ದುಗೆ ಏರುವ ಮೂಲಕ ಸೌಹಾರ್ದತೆಯ ಹೊಸ ಇತಿಹಾಸ ಬರೆದಿದ್ದಾರೆ.

ಟ್ವೀಟ್ ಮೂಲಕ ಶುಭಕೋರಿದ ಪ್ರಧಾನಿ ಮೋದಿ

ಡಿ.ಕೆ.ಶಿವಕುಮಾರ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಮೂಲಕ ವಿಶೇಷವಾಗಿ ಶುಭ ಕೋರಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. ಕೇಂದ್ರ ಸರ್ಕಾರವು ಕರ್ನಾಟಕದ ಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರಾಜಕಾರಣದ ದಿಗ್ಗಜರೇ ನೆರೆದಿದ್ದರು. ಕಾಂಗ್ರೆಸ್ ಅಗ್ರ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ದೇಶ ಹಾಗೂ ರಾಜ್ಯದ ಹಲವು ಗಣ್ಯರು, ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿ ನೂತನ ಮುಖ್ಯಮಂತ್ರಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು.

Join WhatsApp

Join Now

Join Telegram

Join Now