ಬೆಂಗಳೂರು, ಜೂನ್ 20: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಮೆದುಳು ಸಂಶೋಧನಾ ಕೇಂದ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು.
ಹಾಗೆಯೇ, ಇದೇ ವೇಳೆ 425 ಕೋಟಿ ರೂ. ವೆಚ್ಚದಲ್ಲಿ ಐಐಎಸ್ಸಿ ಆವರಣದಲ್ಲಿ ನಿರ್ಮಾಣ ವಾಗಲಿರುವ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಗೂ ಪ್ರಧಾನಿಯವರು ಶಂಕುಸ್ಥಾಪನೆ ನೆರವೇರಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ದಾನಿಗಳಾದ ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೊಮ್ಮಘಟ್ಟ ಹೆಲಿಪ್ಯಾಡ್‌ನಿಂದ ಜ್ಞಾನಭಾರತಿ ಆವರಣದತ್ತ ಮೋದಿ ತೆರಳಿದ್ದು, ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ ಮಾಡಿದ್ದು, ಬೇಸ್ ವಿಶ್ವವಿದ್ಯಾಲಯ ಉದ್ಘಾಟನೆಯನ್ನು ಮಾಡಲಿದ್ದಾರೆ. ಉನ್ನತೀಕರಣಗೊಂಡ 151 ಐಟಿಐ ಕಾಲೇಜುಗಳ ಲೋಕಾರ್ಪಣೆ ಮಾಡಲಿದ್ದಾರೆ.