ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರ ಸ್ವಾಗತಕ್ಕೆ ರಾಜ್ಯ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ನಾಳೆ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ರಾಜ್ಯ ನಾಯಕರು ಪ್ರಧಾನಿ ಮೋದಿಯವರೊಂದಿಗೆ ಸಾಥ್ ನೀಡಲಿದ್ದಾರೆ.
ಬೆಳಗ್ಗೆ 10ಕ್ಕೆ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ ಬಳಿಕ ಕನಕದಾಸ ಜಯಂತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. 10.30ಕ್ಕೆ ವಿಧಾನಸೌಧ ತಲುಪಲಿದ್ದಾರೆ. ಶಾಸಕರ ಭವನದಲ್ಲಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ವಾಲ್ಮೀಕಿ ಪ್ರತಿಮೆಗೂ ಮಾಲಾರ್ಪಣೆ ಮಾಡಲಿದ್ದಾರೆ.
10.52ಕ್ಕೆ ರೈಲ್ವೇ ಸ್ಟೇಷನ್ ಗೆ ಬಂದು ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ಅದಾದ ಬಳಿಕ 11 ಗಂಟೆಗೆ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಹೆಬ್ಬಾಳ ವಾಯುನೆಲೆ ಕಮಾಂಡ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. 11.40ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣ ಟರ್ಮಿನಲ್ ಗೆ ಆಗಮಿಸಲಿದ್ದಾರೆ. 11.50ಕ್ಕೆ ಟರ್ಮಿನಲ್ ಉದ್ಘಾಟನೆ ಮಾಡಲಿದ್ದಾರೆ. ಹೀಗೆ ಪ್ರಧಾನಿ ಮೋದಿಯವರು ರಾಜ್ಯದಲ್ಲಿ ನಾಳೆ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.