ಚಿತ್ರದುರ್ಗ, (ಜನವರಿ.04) : ಕೇಂದ್ರ ಸರ್ಕಾರದಿಂದ ರೈತರಿಗೆ ಪಿ.ಎಂ.ಕಿಸಾನ್ (PM KISAN) ಯೋಜನೆಯಡಿ ನೋಂದಾಯಿತ ಆರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಜಮೆ ಆಗುತ್ತಿದೆ.
ಈ ಸಂಬಂಧ ಆರ್ಹ ಫಲಾನುಭವಿಗಳಿಗೆ ಕಡ್ಡಾಯವಾಗಿ ಇ-ಕೆ.ವೈ.ಸಿ ಮಾಡಿಕೊಳ್ಳಲು ಕೃಷಿ ಇಲಾಖೆ ಸಮಸ್ತ ರೈತಭಾಂದವರಲ್ಲಿ ಕೋರಲಾಗಿದೆ.
ಪ್ರತಿಯೊಬ್ಬ ರೈತ ಫಲಾನುಭವಿಯು http://pmkisan.gov.inWebsite ಗೆ ಬೇಟಿ ನೀಡಿ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ನಮೂದಿಸಿ ಉಚಿತವಾಗಿ ಇ-ಕೆ.ವೈ.ಸಿ ಮಾಡಿಕೊಳ್ಳಬಹುದು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ನೋದಾವಣೆಯಾಗದ ರೈತರು ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ (CSC -Citizen Service Center) ಬೇಟಿ ನೀಡಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳಚ್ಚು ನಮೂದಿಸಿ ಇ-ಕೆ.ವೈ.ಸಿ ಮಾಡಿಸಿಕೊಳ್ಳಬಹುದು .ಈಪ್ರಕಿಯೆಗಾಗಿ ಸಾಮಾನ್ಯ ಸೇವಾ ಕೇಂದ್ರದವರಿಗೆ ಶುಲ್ಕ ಪಾವತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಬೇಟಿ ನೀಡಬೇಕೆಂದು ಹಾಗೂ ಇ-ಕೆ.ವೈ.ಸಿ ಅಪ್ಡೇಟ್ ಮಾಡಲು 2022ರ ಮಾಚ್-31 ಕೊನೆಯ ದಿನಾಂಕವಾಗಿರುತ್ತೆಂದು ಚಿತ್ರದುರ್ಗ ಕೃಷಿ ಇಲಾಖೆ ಉಪ ಕೃಷಿ ನಿರ್ದೇಶಕರು ಹೆಚ್ ಹುಲಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…