Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಪ್ರಾಪ್ತ ವಿದ್ಯಾರ್ಥಿನಿ ಮೇಲಿನ ದೌರ್ಜನ್ಯ: ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 10 : ತಾಲ್ಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವು ಗುರು-ಶಿಷ್ಯ ಸಂಬಂಧಕ್ಕೇ ಕಳಂಕ ತರುವಂತಾಗಿದೆ.

16 ವರ್ಷದ ವಿದ್ಯಾರ್ಥಿನಿಯ ಮೇಲೆ ಗಣಿತ ಶಿಕ್ಷಕ ಹೆಚ್.ಒ. ರಾಜಣ್ಣ ತರಗತಿ ಕೊಠಡಿಯಲ್ಲೇ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಇದರ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಾಳೆ ಎನ್ನಲಾಗಿದೆ. ಘಟನೆ ಬಹಿರಂಗವಾದ ಬಳಿಕ, ಆರೋಪಿಯು ಚಳ್ಳಕೆರೆಯ ಖಾಸಗಿ ಆಸ್ಪತ್ರೆಯ ವೈದ್ಯೆ ಶಂಕರಲಕ್ಷ್ಮೀ ಸಹಾಯದಿಂದ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ವಿಷಯ ತಿಳಿಯುತ್ತಿದ್ದಂತೆ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸುವಂತೆ ಕ್ರಮ ಕೈಗೊಂಡಿದ್ದಾರೆ. ಮಕ್ಕಳ ರಕ್ಷಣಾಧಿಕಾರಿ ರೇಖಾ ನೀಡಿದ ದೂರಿನ ಆಧಾರದ ಮೇಲೆ ಶಿಕ್ಷಕ ರಾಜಣ್ಣ ಮತ್ತು ವೈದ್ಯೆ ಶಂಕರಲಕ್ಷ್ಮೀ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ಶಿಕ್ಷಕ ನಾಪತ್ತೆಯಾಗಿದ್ದು, ನಂತರ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದುಬಂದಿದೆ. ಗರ್ಭಪಾತಕ್ಕೆ ಸಹಕರಿಸಿದ ವೈದ್ಯೆಯೂ ಪರಾರಿಯಾಗಿದ್ದು, ಇಬ್ಬರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಶಿಕ್ಷಣ ಇಲಾಖೆ ಗಂಭೀರವಾಗಿ ಸ್ಪಂದಿಸಿದ್ದು, ಆರೋಪಿಯನ್ನ ತಕ್ಷಣವೇ ಅಮಾನತು ಮಾಡಿ ಆದೇಶ ಹೊರಡಿಸಿದೆ. ಸದ್ಯ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದು, ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...