ಫೋಕ್ಸೋ ಪ್ರಕರಣ : ಯಡಿಯೂರಪ್ಪರಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

1 Min Read

ನವದೆಹಲಿ: ಫೋಕ್ಸೋ ಪ್ರಕರಣದಲ್ಲಿ ಸದ್ಯ ಯಡಿಯೂರಪ್ಪ ಅವರಿಗೆ ರಿಲ್ಯಾಕ್ಸ್ ಸಿಕ್ಕಿದೆ. ಹೈಕೋರ್ಟ್ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಆದ್ರೆ ಈಗ ಸುಪ್ರೀಂ ಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು.

ಯಡಿಯೂರಪ್ಪ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಿತು. ಇಂದು ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಇನ್ನು ಕೋರ್ಟ್ ನಲ್ಲಿ ಬಿಎಸ್ವೈ ಪರ ವಕೀಲ ಸಿದ್ದಾರ್ಥ್ ಲೂಥ್ರಾ ಅವರು ವಾದ ಮಂಡನರ ಮಾಡಿದರು‌. ಹೈಕೋರ್ಟ್ ಆದೇಶದಲ್ಲಿರುವ ಕೆಲವು ದೋಪಗಳನ್ನು ಉಲ್ಲೇಖಿಸಿ ವಾದ ಮಂಡನೆ ಮಾಡಿದರು. ಆದೇಶ ನೀಡುವುದಕ್ಕೂ ಮುನ್ನ ಹೈಕೋರ್ಟ್ ಕೆಲವು ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷ್ಯ ಮಾಡಿದೆ. ಪ್ರಮುಖ ಆರೋಪಿತರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದಾರೆ ಎಂಬುದನ್ನು ಕೋರ್ಟ್ ಗಮನಕ್ಕೆ ತಂದಿದ್ದಾರೆ. ಬಳಿಕ ಇನ್ನಷ್ಟು ವಾದ ಕೇಳಿದ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸಕ್ಕೆ ಅಮ್ಮ ಮಗಳು ಹೋದಾಗ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರಲ್ಲಿ ಬಾಲಕಿಯ ತಾಯಿ ದೂರನ್ನು ದಾಖಲಿಸಿದ್ದರು. ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು. 2024ರಲ್ಲಿಯೇ ಸಿಐಡಿ ಈ ಕೇಸ್ ಗೆ ಸಂಬಂಧಿಸಿದಂತೆ 750 ಪುಟಗಳ ಚಾರ್ಜ್ ಶೀಟ್ ಅನ್ನು ಕೂಡ ಸಲ್ಲಿಕೆ ಮಾಡಿತ್ತು.

Share This Article