ಬಿ.ವೈ.ವಿಜಯೇಂದ್ರರನ್ನ ವಶಕ್ಕೆ ಪಡೆದ ಪೊಲೀಸರು ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ..!

suddionenews
1 Min Read

ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ನ್ಯಾಯ ಸಿಗಬೇಕು, ಕಾಂಗ್ರೆಸ್ ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಅವರ ಹೆಸರುಗಳನ್ನು ಎಫ್ಐಆರ್ ನಲ್ಲಿ ಸೇರಿಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿ ಇಂದು ಹೋರಾಟ ಮಾಡುತ್ತಿದ್ದಾರೆ. ಕೊಡಗಿನಲ್ಲಿ ಈ ಸಂಬಂಧ ಹೋರಾಟ ನಡೆಯುತ್ತಿದೆ. ಈ ವೇಳೆ ಬಿ.ವೈ.ವಿಜಯೇಂದ್ರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಬಯ್ ಸೋಮಯ್ಯ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿದ ಬಿವೈ ವಿಜಯೇಂದ್ರ ಅವರು ಕುಟುಂಬಸ್ಥರಿಗೆ ಸಾಂತ್ವಾನವನ್ನು ಹೇಳಿದ್ದಾರೆ. ಬಳಿಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮ ಪಕ್ಷದ ನಿಷ್ಠಾವಂತ ಹಾಗೂ ಪ್ರಾಮಾಣಿಕ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಬೆದರಿಕೆ ಹಾಗೂ ಒತ್ತಡ ಹಾಕಿದ್ದಾರೆ ಎಂದರೆ ಇದು ಬಹಳ ಖಂಡನೀಯ. ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿರುವ ಶಾಸಕರಾದ ಪೊನ್ನಣ್ಣ ಹಾಗೂ ಮಂಥರ್ ಗೌಡ ಹೆಸರುಗಳನ್ನು ಎಫ್ಐಆರ್ ನಲ್ಲಿ ಸೇರಿಸುವಂತೆ ಹೋರಾಟ ಮುಂದುವರೆಸಲಾಗಿದೆ. ಈ ಸರ್ಕಾರ ನಮ್ಮನ್ನು ಬಂಧಿಸಿದ್ದು, ವಿಬಯ್ ಸೋಮಯ್ಯ ಅವರ ಸಾವಿಗೆ ನ್ಯಾಯ ಸಿಗುವ ತನಕ ಹೋರಾಟ ಮುಂದುವರೆಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಸರ್ಕಾರವು ದ್ವೇಷ, ಬೆದರಿಕೆ ಮತ್ತು ಭಯದಲ್ಲಿ ಬೇರೂರಿರುವ ಅಪಾಯಕಾರಿ ರಾಜಕೀಯವನ್ನು ಮುಂದುವರೆಸಿದೆ. ಈ ಆಡಳಿತ ವೈಫಲ್ಯಗಳನ್ನು ಪ್ರಶ್ನಿಸಲು ಅಥವಾ ಬಹಿರಂಗಪಡಿಸಲು ಧೈರ್ಯ ಮಾಡುವ ಯಾರನ್ನಾದರಯು ಗುರಿಯಾಗಿಸಿಕೊಂಡು ಮೌನಗೊಳಿಸಲಾಗುತ್ತಿದೆ. ಬಿಜೆಪಿಯ ಕಾರ್ಯಕರ್ತ ವಿನಯ್ ಸೋಮಯ್ಯ ಅವರಹ ಈ ಆಡಳಿತದ ಸೇಡಿನ ಕ್ರಮಗಳಿಗೆ ದುರಂತವಾಗಿ ಬಲಿಯಾಗಿದ್ದಾರೆ. ಸ್ಥಳೀಯ ಕಾಂಗ್ರೆಸ್ ಶಾಸಕರ ತಪ್ಪುಗಳ ವಿರುದ್ಧ ಧ್ವನಿ ಎತ್ತಿದ್ದು ಅವರ ಏಕೈಕ ತಪ್ಪು. ಶಾಸಕ ಮತ್ತು ಸ್ಥಳೀಯ ಪೊಲೀಸರ ನಡುವಿನ ಸ್ಪಷ್ಟ ಸಂಬಂಧದಲ್ಲಿ ವಿನಯ್ ಅವರಿಗೆ ನಿರಂತರವಾಗಿ ಕಿರುಕುಳ ನೀಡಲಾಗಿದೆ ಎಂದು ಬಿವೈ ವಿಜಯೇಂದ್ರ ಅವರು ಆಕ್ರೋಶ ಹೊರ ಹಾಕಿದರು.

Share This Article
Leave a Comment

Leave a Reply

Your email address will not be published. Required fields are marked *