ಬೆಂಗಳೂರು; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರ್ಘಟನೆಗೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ತಲೆದಂಡ ಮಾಡಿದೆ. ಕಮಿಷನರ್ ಸೇರಿದಂತೆ ಐದು ಪೊಲೀಸ್ ಅಧಿಕಾರಿಯನ್ನ ಅಮಾನತು ಮಾಡಿ ಆದೇಶ ಹೊರಡಿಸಿದೆ. ಇದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ಲ್ಯಾನ್ ಮಾಡಿದೆ.
ಯಾವುದೇ ಅಹಿತರಕರ ಘಟನೆ ನಡೆಯದಂತೆ ಎಚ್ಚರವಹಿಸುವುದಕ್ಕೆ ಸಿಎಂ ನಿವಾಸದ ಬಳಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದಾರೆ. ಕುಮಾರಕೃಪ ರಸ್ತೆಯಲ್ಲಿ ಫುಲ್ ಅಲರ್ಟ್ ಆಗಿದ್ದಾರೆ. ಪೊಲೀಸರನ್ನ ಅಮಾನತುಗೊಳಿಸಿದ
ರಾಜ್ಯ ಸರ್ಕಾರ ಬಹಳ ದೊಡ್ಡ ಮನಸ್ಸು ಮಾಡಿ, ಮೊನ್ನೆ ಕಾಲ್ತುಳಿತಕ್ಕೆ ಹನ್ನೊಂದು ಜನ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ರಿಜಿಸ್ಟರ್ ಮಾಡಿದ್ದಾರೆ. ಎಫ್ಐಆರ್ ರಿಜಿಸ್ಟರ್ ಮಾಡೋದಕ್ಕೆ ಕಾರಣ ಅಂದ್ರೆ, ನಿನ್ನೆ ರಾಜ್ಯದ ಉಚ್ಛ ನ್ಯಾಯಾಲಯ ಸುಮೋಟೋ ಕೇಸನ್ನ ತೆಗೆದುಕೊಂಡು, ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದ ನಂತರವೇ ಎಚ್ಚೆತ್ತುಕೊಂಡಿರುವುದು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪರ್ಮಿಷನ್ ಇಲ್ಲದೆ ಜನರನ್ನ ಸೇರಿಸಿದ್ದರು ಅಂತ ಪೊಲೀಸರು ಎಫ್ಐಆರ್ ಹಾಕಿದ್ದಾರೆ. ಅನುಮತಿ ಇಲ್ಲದೆ ಸಿಎಂ ಹಾಗೂ ಡಿಸಿಎಂ ಯಾಕೆ ಹೋದ್ರು..? ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ ನೀಡಬೇಕು. ನಾನು ಹೀಗೆ ಒಂದು ಕಡೆ ಹೋದಾಗ ಕಾಮನ್ ಮ್ಯಾನ್ ಒಬ್ರು ಅಂದ್ರೆ ಆಟೋ ಚಾಲಕರೊಬ್ಬರು ಕೇಳಿದ್ರು. ಹನ್ನೊಂದು ಜನ ಸಾವನ್ನಪ್ಪಿದ್ದಾರೆ. ಈ ಕಾಂಗ್ರೆಸ್ ಸರ್ಕಾರವನ್ನು ಕಿತ್ತೆಸೆಯಬೇಕು ಎಂದು ಹೇಳ್ತಾ ಇದ್ದಾರೆ. ಅದು ಕಾಮನ್ ಮ್ಯಾನ್ ಆ ರೀತಿ ಹೇಳಿರೋದು ಅಂತ ವಾಗ್ದಾಳಿ ನಡೆಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















