Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಗಸ್ಟ್.2ಕ್ಕೆ ಪೊಲೀಸ್ ಕಾನಸ್ಟೇಬಲ್‍ಗಳ ನೇಮಕಾತಿ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

---Advertisement---

ಬೆಂಗಳೂರು.ಜುಲೈ.29: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರ ಅವರಿಂದ ನಾಗರಿಕ ಪೊಲೀಸ್ ಕಾನಸ್ಟೇಬಲ್‍ಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು ಅಗಸ್ಟ್ 02, 2026 ರಂದು ಬೆಳಿಗ್ಗೆ 10:30 ಗಂಟೆಯಿಂದ 12 ಗಂಟೆಯವರೆಗೆ ಹುಬ್ಬಳ್ಳಿ-ಧಾರವಾಡ ನಗರ ಹಾಗೂ  ಧಾರವಾಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ನಡೆಸಲಾಗುತ್ತದೆ. ಸದರಿ ನೇಮಕಾತಿ ಲಿಖಿತ ಪರೀಕ್ಷೆ ಕಾಲಕ್ಕೆ ನಿಷೇಧಿತ ವಸ್ತುಗಳು ಹಾಗೂ ವಸ್ತ್ರ ಸಂಹಿತೆ ಬಗ್ಗೆ ಪ್ರಾಧಿಕಾರವು ಪರೀಕ್ಷಾ ಅಭ್ಯರ್ಥಿಗಳಿಗೆ ಕೆಲವು ಸೂಚನೆಗಳನ್ನು ಹೊರಡಿಸಿದೆ.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‍ಗಳನ್ನು ಅನುಮತಿಸಲಾಗುವುದಿಲ್ಲ, ಅರ್ಧ ತೋಳಿನ ಶರ್ಟ್‍ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಾಲರ್‍ರಹಿತ ಸಾಧಾರಣ ಶರ್ಟ್, ಟಿ-ಶರ್ಟ್ ಧರಿಸಲು ಆದ್ಯತೆ ನೀಡಿದೆ. ಫ್ಯಾಂಟ್ ಮತ್ತು ಸರಳ ಫ್ಯಾಂಟ್ (ಜೇಬುಗಳು ಇಲ್ಲದಿರುವ, ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್‍ಕೋಡ್ ಆಗಿದೆ. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಜಿಪ್ ಪಾಕೆಟ್‍ಗಳು, ಪಾಕೆಟ್‍ಗಳು, ದೊಡ್ಡ ಬಟನ್‍ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸಬೇಕು. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಜ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್ ಧರಿಸಬಾರದು, ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಧರಿಸಬೇಕು. ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.

ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).

ನಿಷೇಧಿತ ವಸ್ತುಗಳ ಪಟ್ಟಿ: ಡ್ರೆಸ್‍ಕೋಡ್‍ನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಯಾವುದೇ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.

ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್ ಗಳು, ಪೆನ್ ಡ್ರೈವ್‍ಗಳು, ಇಯರ್ ಫೋನ್ ಗಳು, ಮೈಕ್ರೋಫೋನ್ ಗಳು, ಬ್ಲೂಟೂಥ್ ಸಾಧನೆಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.

ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ. ಬಣ್ಣದ ಹಾಗೂ ಲೋಹದ ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್‍ಗಳು ಮತ್ತು ಲಾಗ್‍ಟೇಬಲ್‍ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸುವಂತಿಲ್ಲ. ಯಾವುದೇ ರೀತಿಯ ಮುಖ ಮುಚ್ಚುವಂತ ಮಾಸ್ಕನ್ನು ಧರಿಸಬಾರದು.

ಸೂಚನೆ: ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ. ನಿಗದಿಪಡಿಸಲಾದ ವಸ್ತ್ರ ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕಠಿಣ ಕ್ರಮವನ್ನು ಜರುಗಿಸಲಾಗುವುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now