ಸುದ್ದಿಒನ್, ಚಿತ್ರದುರ್ಗ, ಮೇ. 22 : ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ ಬೇಸಿಗೆ ಸಮಯದ ರಸಪ್ರಶ್ನೆ ಕಾರ್ಯಕ್ರಮದ 60 ವಿಜೇತರಿಗೆ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಅವರು ಹೆಲೈಟ್ ಮತ್ತು ಪ್ರಶಂಸನಾ ಪತ್ರಗಳನ್ನು ವಿತರಿಸಿದರು.
ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕೇಂದ್ರಸ್ಥಾನದಲ್ಲಿನ ಸಭಾಂಗಣದಲ್ಲಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

ಪೊಲೀಸ್ ಇಲಾಖೆಯ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಮೇ 01 ರಿಂದ 15 ರ ವರೆಗೂ ಬೇಸಿಗೆ ಸಮಯದ ರಸಪ್ರಶ್ನೆ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರತಿದಿನ ಬೆಳಗ್ಗೆ 9:00 ಗಂಟೆಗೆ ಮತ್ತು ಸಂಜೆ 6:00 ಗಂಟೆಗೆ ಕಾನೂನು ಅರಿವು ಮತ್ತು ಅಪರಾಧ ತಡೆಟ್ಟುವಿಕೆ ಹಾಗೂ ಸಂಚಾರ ನಿಯಮಗಳ ಕುರಿತಾದ ಜಾಗೃತಿ ಪ್ರಶ್ನೆಗಳನ್ನು ಕೇಳಲಾಗಿತ್ತು, ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕವಾಗಿ ಪ್ರತಿಕ್ರಿಯೆ ವ್ಯಕ್ತವಾಯಿತು. ಸುಮಾರು 5000 ರಿಂದ 6000 ಸಾರ್ವಜನಿಕರು ಇಲಾಖೆಯು ಪೊಸ್ಟ್ ಮಾಡಿದ ಪ್ರಶ್ನೆಗಳಿಗೆ ಕಾಮೆಂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಉತ್ತರಿಸಿದ್ದರು. ಪ್ರತಿ ದಿನಕ್ಕೆ 04 ವಿಜೇತರಂತೆ 15 ದಿನಕ್ಕೆ ಒಟ್ಟು 60 ಜನರನ್ನು ಆಯ್ಕೆ ಮಾಡಲಾಗಿತ್ತು
ಈ ವೇಳೆ ಎಸ್.ಪಿ. ರಂಜಿತ್ ಕುಮಾರ್ ಬಂಡಾರು ಅವರು ಸಾರ್ವಜನಿಕರಿಗೆ ಹೆಲೈಟ್ ಬಳಕೆ ಮತ್ತು ಸಂಚಾರ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಡಿಎಆರ್ ರವರು ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















