ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳ್ಳಗ್ಗೆ ಪೊಲೀಸರ ಗುಂಡಿನ ಶಬ್ಧ ಕೇಳಿಸಿದೆ. ತಪ್ಪಿಸಿಕೊಳ್ಳುತ್ತಿದ್ದ ರೌಡಿಶೀಟರ್ ಹಿಡಿಯಲು ಪೊಲೀಸರು ಗುಂಡು ಹಾರಿಸಿದ್ದಾರೆ. ಲೋಹಿತ್ ಎಂಬಾತನ ಮೇಲೆ ಫೈರಿಂಗ್ ನಡೆದಿದೆ.

ರೌಡಿ ಶೀಟರ್ ಲೋಹಿತ್ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ. ಹೀಗಾಗಿ ಮೊದಲಿಗೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಆತನಿಗೆ ವಾರ್ನಿಂಗ್ ಕೊಟ್ಟಿದ್ದರು. ಆದರೂ ಆದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಇಂದಿರಾ ನಗರ ಠಾಣೆಯ ಪಿಎಸ್ಐ ಅಮರೇಶ್ ಜೇಗರಕಲ್ ಅವರು ಲೋಹಿತ್ ಬಲಗಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ.

ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನ್ಯಾಪ್ ಕೇಸ್ ನಲ್ಲೂ ಈತನ ಹೆಸರು ಕೇಳಿ ಬಂದಿದೆ. ಅಷ್ಟೇ ಅಲ್ಲ ಲೋಹಿತ್ ವಿರುದ್ಧ ಸಾಕಷ್ಟು ಕ್ರಿಮಿನಲ್ ಕೇಸ್ ಗಳು ದಾಖಲಾಗಿವೆ. ಇಂದಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಸುಮಾರು 17 ಕೇಸ್ ಗಳು ದಾಖಲಾಗಿವೆ. ಕೊಲೆ, ಕಿಡ್ನ್ಯಾಪ್ ಸೇರಿದಂತೆ ಹಕವು ಕ್ರಿಮಿನಲ್ ಪ್ರಕರಣದಲ್ಲಿ ಈತನ ಹೆಸರಿದೆ.
ಪತ್ತೆಯಾಗದೇ ತಲೆ ಮರೆಸಿಕೊಂಡು ಓಡಾಡುತ್ತಿದ್ದ. ಆತನ ಪತ್ತೆಗೆ ಹಲಸೂರು ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿತ್ತು. ಇಂದು ಆರೋಪಿಯು ಜೀವನ್ ಭೀಮಾನಗರ ಕಡೆಗೆ ಬರುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಬೆಳಗ್ಗೆ ಪೊಲೀಸರು ಆತನ ಬೆನ್ನತ್ತಿದ್ದಾರೆ. ಈ ವೇಳೆ ಕಾನ್‌ಸ್ಟೇಬಲ್ ಮೇಲೆ ಆರೋಪಿ ಹಲ್ಲೆಗೆ ಮುಂದಾಗಿದ್ದಾನೆ. ಆಗ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಪೂರ್ವ ವಿಭಾಗ ಡಿಸಿಪಿ ಡಾ. ಶರಣಪ್ಪ ತಿಳಿಸಿದ್ದಾರೆ.

