ಚಿತ್ರದುರ್ಗ: ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಇದೇ ಮೇ 17ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ 1996ನೇ ಬ್ಯಾಚ್ ಪೊಲೀಸ್ ಅಧಿಕಾರಿಗಳ ಸ್ನೇಹ ಸಮ್ಮೀಲನ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಕೆ.ವಿ.ಗಗನ್ ದೀಪ್ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದಾವಣಗೆರೆ ಪೂರ್ವವಲಯ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಡಾ.ಬಿ.ಆರ್.ರವಿಕಾಂತೇಗೌಡ ಅಧ್ಯಕ್ಷತೆ ವಹಿಸುವರು. ಡಾ.ಎ.ಎಸ್.ವಿಜಯಲಕ್ಷ್ಮಿ ಗಗನ್ ದೀಪ್ ಉದ್ಘಾಟನೆ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಟಿ.ಶೇಖರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹೆಚ್.ಪರಮೇಶ್ವರ, ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ಆರ್.ಶಿವಕುಮಾರ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











