ಬೆಂಗಳೂರು: ಪುಂಡಾಟಿಕೆ ತೋರಿಸುತ್ತಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಪಶ್ಚಿಮ ವಿಭಾಗದಲ್ಲಿ ಮತ್ತೆ ರೌಡಿ ಶೀಟರ್ ಗಳ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಪಶ್ಚಿಮ ವಿಭಾಗದ 6 ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿದ್ದು, ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಮಾಗಡಿ ರೋಡ್ ಮತ್ತು ಕೆಪಿ ಅಗ್ರಹಾರ, ಬ್ಯಾಟರಾಯನ ಪುರ, ಕಾಟನ್ ಪೇಟೆ, ಜೆಜೆ ನಗರ, ಚಾಮರಾಜ ಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಮನೆಗಳ ಮೇಲೆ ಡಿಸಿಪಿ,ಎಸಿಪಿ, ಇನ್ಸ್ ಪೆಕ್ಟರ್ ಗಳು ದಾಳಿ ನಡೆಸಿದ್ದಾರೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ. ಪಶ್ಚಿಮ ವಿಭಾಗದ ಪೊಲೀಸರಿಂದ ರೌಡಿ ಶೀಟರ್ ನಿವಾಸಗಳ ಮೇಲೆ ದಾಳಿ.
ಪಶ್ಚಿಮ ವಿಭಾಗದ ಕೆಂಗೇರಿ ಮತ್ತು ವಿಜಯನಗರ ಸಬ್ ಡಿವಿಷನ್ ನಲ್ಲಿ ದಾಳಿ ನಡೆದಿದ್ದು, ಅಪರಾಧ ಪ್ರಕರಣಗಳಲ್ಲಿ ಹೆಚ್ಚು ಸಕ್ರಿಯವಾಗಿದ್ದ ರೌಡಿ ಶೀಟರ್ ಮನೆಗಳ ಮೇಲೆ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಪೆಡ್ಲರ್ ಗಳ ಮನೆ ಮೇಲೆ ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಲಿಯೋ, ಕಾರ್ತಿಕ್, ಹಿದಾಯತ್, ವಾಸಿಂಪಾಷ, ಡಿಕ್ರಿ ಸಲೀಂ, ಆಯೂಬ್ ಖಾನ್, ವಿನೋದ್, ವೆಂಕಟೇಶ್, ವಿಜಯ್, ಸತೀಶ ಸೇರಿದಂತೆ ಹಲವರ ಮನೆ ಮೇಲೆ ದಾಳಿ ನಡೆದಿದೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…