Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯಾದ್ಯಂತ ರೌಡಿಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಎಸ್‌ ಪಿ ರಂಜಿತ್ ಕುಮಾರ್ ಬಂಡಾರು ಎಚ್ಚರಿಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್‌. 25 : ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಚಿತ್ರದುರ್ಗ ಜಿಲ್ಲಾ ರೌಡಿ ನಿಗ್ರಹ ಪಡೆ (Anti Rowdy Squad) ಭರ್ಜರಿ ಕಾರ್ಯಾಚರಣೆ ಕೈಗೊಂಡಿದೆ. ಜೂನ್ 23ರ ಮಂಗಳವಾರ ರಾತ್ರಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಎಲ್ಲಾ ರೌಡಿ ಆಸಾಮಿಗಳ ಮನೆಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

 

ಮುಖ್ಯಮಂತ್ರಿಗಳ ಆದೇಶ ಹಾಗೂ ಬೆಂಗಳೂರಿನ ಡಿ.ಜಿ ಮತ್ತು ಐ.ಜಿ.ಪಿ. ಅವರ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ಮತ್ತು ವೃತ್ತ ಮಟ್ಟದಲ್ಲಿ ರೌಡಿ ನಿಗ್ರಹ ಪಡೆಯನ್ನು ರಚಿಸಲಾಗಿದೆ. ಈ ಪಡೆಯು ಜಿಲ್ಲೆಯಾದ್ಯಂತ ನಿರಂತರವಾಗಿ ಸಕ್ರಿಯವಾಗಿದ್ದು, ಸಮಾಜ ವಿರೋಧಿ ಶಕ್ತಿಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ನಡೆದ ದಿಢೀರ್ ದಾಳಿಯ ವೇಳೆ ರೌಡಿಗಳು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆಯೇ ಎಂಬ ಬಗ್ಗೆ ಸಂಪೂರ್ಣ ತಪಾಸಣೆ ನಡೆಸಲಾಯಿತು.

 

ದಾಳಿಯ ಸಂದರ್ಭದಲ್ಲಿ ರೌಡಿ ಆಸಾಮಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಲಾಗಿದ್ದು, ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು ಎಂದು ಸೂಚಿಸಲಾಗಿದೆ. ತಮ್ಮ ಹಳೆಯ ಕಾನೂನು ಬಾಹಿರ ನಡವಳಿಕೆಗಳನ್ನು ಸಂಪೂರ್ಣವಾಗಿ ನಿಲ್ಲಿಸಿ, ಸಮಾಜದಲ್ಲಿ ಸುಧಾರಿತ ನಾಗರಿಕರಾಗಿ ಉತ್ತಮ ಜೀವನ ನಡೆಸಬೇಕು. ಒಂದು ವೇಳೆ ನಿಯಮ ಮೀರಿ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಕೊಂಡರೆ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸರು ಅಂತಿಮ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ರೌಡಿ ಚಟುವಟಿಕೆಗಳು ಅಥವಾ ಅಕ್ರಮಗಳು ಕಂಡುಬಂದಲ್ಲಿ ತಕ್ಷಣವೇ ಸಹಾಯವಾಣಿ ಸಂಖ್ಯೆ 112 ಗೆ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಬೇಕು. ಮಾಹಿತಿ ನೀಡುವ ಸಾರ್ವಜನಿಕರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು (IPS) ಅವರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now