Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪನವರು ನಡೆದುಬಂದ ರಾಜಕೀಯ ಹಾದಿ ಹೇಗಿದೆ..?

---Advertisement---

ವಯೋಸಹಜ ಕಾಯಿಲೆಯಿಂದ ಶಾಮನೂರು ಶಿವಶಂಕರಪ್ಪ ಅವರು ನಿನ್ನೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ಅವರು ನಡೆದು ಬಂದ ರಾಜಕೀಯ ಹಾದಿಯ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತದಲ್ಲಿಯೇ ಹಿರಿಯ ಶಾಸಕ ಎಂಬ ಹೆಗ್ಗಳಿಕೆ ಪಡೆದಿದ್ದ ಇವರು, ಜೂನ್ 16, 1931ರಂದು ದಾವಣಗೆರೆಯಲ್ಲಿ ಜನಿಸಿದರು. ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಶಾಮನೂರು ಮುಂದೆ ರಾಜಕೀಯ, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಹಲವು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಇದ್ದವರು. ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ದಾವಣಗೆರೆಯ ಅಂಗವಿಕಲರ ಆಶಾಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ ಕ್ಲಬ್ ನ ಅಧ್ಯಕ್ಷರಾಗಿ, ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷ, ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥರ ಹಾಗೂ ಬಾಪೂಜಿ ಇಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದರು.

ಮೂರು ದಶಕಗಳಿಂದ ಕೆಪಿಸಿಸಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದಾರೆ. 1978 ರಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ, 1998 -1999 ರ ಅವಧಿಯಲ್ಲಿ ಸಂಸದರಾಗಿ ಆಯ್ಕೆ, 2004ರಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ, 2008ರಲ್ಲಿಯೂ ದಾವಣಗೆರೆಯಿಂದಾನೇ ಆಯ್ಕೆ, 2013ರಲ್ಲಿ ಶಾಸಕರಾಗಿ ಗೆಲುವು ಸಾಧಿಸಿ, ತೋಟಗಾರಿಕೆ ಸಚಿವರಾದರು. 2018ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಸಕರಾಗಿ ಜಯ ಸಾಧಿಸಿದ್ದರು. 2023ರಲ್ಲಿಯೂ ದಾವಣಗೆರೆಯ ದಕ್ಷಿಣ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. ಆದರೆ ವಯೋಸಹಜ ಅನಾರೋಗ್ಯದಿಂದ ಎಲ್ಲರನ್ನು, ಎಲ್ಲವನ್ನು ಬಿಟ್ಟು ಅಗಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...