Connect with us

Hi, what are you looking for?

ರಾಜ್ಯ ಸುದ್ದಿ

ಆರ್ಯ ಈಡಿಗ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ; ಜು.25 ರಂದು ಗಂಗಾವತಿಯಲ್ಲಿ ಚಿಂತನ ಮಂಥನ ಸಭೆ

ಸುದ್ದಿಒನ್ ನ್ಯೂಸ್ | ಚಿತ್ರದುರ್ಗ, (ಜು.09) : ಸಣ್ಣ ಸಣ್ಣ ಸಮಾಜಗಳಿಗೆ ನಿಗಮ ಮಂಡಳಿ ಸ್ಥಾಪಿಸಿರುವ ರಾಜ್ಯ ಬಿಜೆಪಿ.ಸರ್ಕಾರ ಈಡಿಗ ಸಮಾಜವನ್ನು ಕಡೆಗಣಿಸುತ್ತಿರುವುದನ್ನು ವಿರೋಧಿಸಿ ಜು.25 ರಂದು ಗಂಗಾವತಿಯಲ್ಲಿ ಚಿಂತನ ಮಂಥನ ಸಭೆ ನಡೆಸಲಾಗುವುದೆಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಅರೆಮಲ್ಲಾಪುರ ಮಹಾಸಂಸ್ಥಾನ ಮಠದ ಡಾ.ಪ್ರಣವಾನಂದ ರಾಮಸ್ವಾಮೀಜಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸ್ವಾಮೀಜಿ ನಮ್ಮ ಜನಾಂಗದ ಮಾಲಿಕಯ್ಯ ಗುತ್ತೆದಾರ್‍ಗೆ ರಾಜಕೀಯವಾಗಿ ಯಾವುದೇ ಸ್ಥಾನಮಾನ ಕೊಟ್ಟಿಲ್ಲ. ಸೇಂದಿ ಇಳಿಸುವುದನ್ನು ಕುಲಕಸುಬನ್ನಾಗಿ ಮಾಡುತ್ತಿರುವ ಈಡಿಗ ಸಮಾಜ ಕಷ್ಟದಲ್ಲಿದೆ. ರಾಜ್ಯ ಬಿಜೆಪಿ.ಸರ್ಕಾರದಲ್ಲಿ ನಮ್ಮ ಜನಾಂಗದ ಏಳು ಮಂದಿ ಶಾಸಕರಿದ್ದಾರೆ.

ಸೇಂದಿ ಮಾರಾಟ ನಿಲ್ಲಿಸಿದ ಮೇಲೆ ಈಚಲುವನವನ್ನು ವಶಕ್ಕೆ ತೆಗೆದುಕೊಂಡಿರುವ ಸರ್ಕಾರ ಈಚಲು ಪ್ರದೇಶವನ್ನು ಈಡಿಗ ಸಮಾಜಕ್ಕೆ ನೀಡಿ ಕೃಷಿ ಮಾಡಿಕೊಂಡು ಜೀವಿಸಲು ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ಈಡಿಗ ಜನಾಂಗದ ಶಕ್ತಿ ಏನೆಂಬುದನ್ನು ಪ್ರದರ್ಶಿಸಬೇಕಾಗುತ್ತದೆ. ಈ ಸಂಬಂಧ ಚರ್ಚಿಸಲು ಕರೆಯಲಾಗಿರುವ ಚಿಂತನ ಮಂಥನ ಸಭೆಯಲ್ಲಿ ರಾಜ್ಯಾದ್ಯಂತ ಈಡಿಗ ಜನಾಂಗದ ಐದು ನೂರು ಮಂದಿ ಪ್ರಮುಖರು ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.

ಎರಡು ಎ.ನಲ್ಲಿರುವ ಈಡಿಗ ಜನಾಂಗವನ್ನು ಪರಿಶಿಷ್ಟ ಜಾತಿ ಇಲ್ಲವೆ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು. ಮಾಲೀಕಯ್ಯ ಗುತ್ತೆದಾರ್‍ರನ್ನು ಎಂ.ಎಲ್.ಸಿ.ಯಾಗಿ ನೇಮಿಸಿ ಮಂತ್ರಿ ಸ್ಥಾನ ನೀಡಿ ನಿಗಮ ಮಂಡಳಿ ರಚಿಸಬೇಕು. ಮಸ್ಕಿ ಚುನಾವಣೆ ಮುಗಿದ ಮೇಲೆ ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಇವರುಗಳು ಮಾತು ಕೊಟ್ಟಿದ್ದರು.

ಆದರೆ ಇದುವರೆವಿಗೂ ಯಾವುದೂ ಕೈಗೂಡಿಲ್ಲ. ರಾಜ್ಯದ ಹದಿನೈದು ಜಿಲ್ಲೆಗಳಿಂದ ಈಡಿಗ ಸಮಾಜದ ಪ್ರಮುಖರು ಚಿಂತನ-ಮಂಥನ ಸಭೆಯಲ್ಲಿ ಸೇರಿ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು. ಒಂದು ವೇಳೆ ನಮ್ಮ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯ ಸರ್ಕಾರಕ್ಕೆ ಈಡಿಗ ಜನಾಂಗದ ಒಗ್ಗಟ್ಟು ತೋರಿಸಬೇಕಾಗುತ್ತದೆ ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದರು.

ನಮ್ಮ ಜನಾಂಗದ ಏಳು ಮಂದಿ ಶಾಸಕರುಗಳಲ್ಲಿ ಐವರು ಹಿರಿಯರಿದ್ದರೂ ಎಲ್ಲೋ ಒಂದು ಕಡೆ ಅವರಿಗೂ ಈಡಿಗ ಜನಾಂಗದ ಬಗ್ಗೆ ಕಾಳಜಿಯಿಲ್ಲದಂತಾಗಿದೆ. ಹಾಗಾಗಿ ಗಂಭೀರವಾಗಿ ಚಿಂತನೆ ನಡೆಸಲಾಗುವುದೆಂದರು.

ಚಿತ್ರದುರ್ಗ ಜಿಲ್ಲಾ ಆರ್ಯ ಈಡಿಗ ಸಮಾಜದ ಅಧ್ಯಕ್ಷ ಹೆಚ್.ಜೀವನ್, ಉಪಾಧ್ಯಕ್ಷ ಟಿ.ಸ್ವಾಮಿ, ತಾಲ್ಲೂಕು ಅಧ್ಯಕ್ಷ ಮಹಾಂತೇಶ್, ಹಿರಿಯೂರು ತಾಲ್ಲೂಕು ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಉಮೇಶ್, ಲಕ್ಷ್ಮಿಕಾಂತ್, ರವಿಕುಮಾರ್ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

 

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!