Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೃಂಗೇರಿಯಲ್ಲಿ ರಾಜಕೀಯ ಪಲ್ಲಟ: ಮರುಎಣಿಕೆಯಲ್ಲಿ ಬಿಜೆಪಿ ಜೀವರಾಜ್ ಗೆಲುವು ಅಧಿಕೃತ

---Advertisement---

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಬಿಜೆಪಿಯ ಡಿ.ಎನ್. ಜೀವರಾಜ್ ಅವರು ನೂತನ ಶಾಸಕರಾಗಿ ಅಧಿಕೃತವಾಗಿ ಘೋಷಿತರಾಗಿದ್ದಾರೆ. ಚುನಾವಣಾ ಆಯೋಗದ ಅನುಮೋದನೆಯೊಂದಿಗೆ ಕ್ಷೇತ್ರದ ಚುನಾವಣಾಧಿಕಾರಿಗಳು ಜೀವರಾಜ್ ಅವರಿಗೆ ವಿಜಯ ಪ್ರಮಾಣಪತ್ರ ಹಸ್ತಾಂತರಿಸಿದ್ದಾರೆ.ಶನಿವಾರ ನಡೆದ ಅಂಚೆ ಮತಗಳ ಮರುಎಣಿಕೆಯಲ್ಲಿ ಜೀವರಾಜ್ ಅವರು ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡರಿಗಿಂತ 55 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರು. ಆದರೆ ಆ ದಿನ ಅಂತಿಮ ಘೋಷಣೆ ಮಾಡಲಾಗದೆ, ವರದಿಯನ್ನು ಚುನಾವಣಾ ಆಯೋಗ ಹಾಗೂ ಹೈಕೋರ್ಟ್‌ಗೆ ಸಲ್ಲಿಸಲಾಗಿತ್ತು. ಬಳಿಕ ಭಾನುವಾರ ತಡರಾತ್ರಿ ಅಧಿಕಾರಿಗಳು ಅಧಿಕೃತ ಘೋಷಣೆ ಮಾಡಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಟಿ.ಡಿ. ರಾಜೇಗೌಡರು ಕೇವಲ 201 ಮತಗಳ ಅಂತರದಲ್ಲಿ ಗೆಲುವು ಸಾಧಿಸಿ ಶಾಸಕರಾಗಿದ್ದರು. ಈ ಫಲಿತಾಂಶ ಪ್ರಶ್ನಿಸಿ ಡಿ.ಎನ್. ಜೀವರಾಜ್ ಅವರು ಅಂಚೆ ಮತಗಳ ಮರುಎಣಿಕೆಗೆ ನ್ಯಾಯಾಲಯದ ಮೊರೆ ಹೋಗಿದ್ದರು. ಮೂರು ವರ್ಷಗಳ ಬಳಿಕ ಹೈಕೋರ್ಟ್ ಮರುಎಣಿಕೆಗೆ ಆದೇಶ ನೀಡಿದ್ದು, ಮೇ 2ರಂದು ಚಿಕ್ಕಮಗಳೂರು ಐಡಿಎಸ್‌ಜಿ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು.ಮರುಎಣಿಕೆಯ ವೇಳೆ ರಾಜೇಗೌಡರಿಗೆ ಬಂದಿದ್ದ 255 ಅಂಚೆ ಮತಗಳು ತಿರಸ್ಕೃತಗೊಂಡಿದ್ದು, ಅಂತಿಮ ಫಲಿತಾಂಶದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಯಿತು. ಇದರೊಂದಿಗೆ ಜೀವರಾಜ್ ಅವರಿಗೆ ಸ್ಪಷ್ಟ ಮುನ್ನಡೆ ದೊರಕಿತು.

ಈ ಬೆಳವಣಿಗೆಯಿಂದ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬಿದ್ದಿದ್ದು, ಬಿಜೆಪಿ ಒಂದು ಸ್ಥಾನ ಹೆಚ್ಚಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ರಾಜಕೀಯ ಸಮೀಕರಣದಲ್ಲಿ ಬದಲಾವಣೆ ಉಂಟಾಗಿದೆ. ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.ಈ ಅಚ್ಚರಿಯ ಫಲಿತಾಂಶ ಕಾಂಗ್ರೆಸ್ ವಲಯಕ್ಕೆ ಶಾಕ್ ನೀಡಿದ್ದು, ಟಿ.ಡಿ. ರಾಜೇಗೌಡರ ಮುಂದಿನ ರಾಜಕೀಯ ನಡೆ ಏನಾಗಲಿದೆ ಎಂಬುದರ ಮೇಲೆ ಇದೀಗ ಎಲ್ಲರ ಗಮನ ನೆಟ್ಟಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...