Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜಕಾರಣಿಗಳು ಶೋಷಿತರನ್ನು ಮತ ಬ್ಯಾಂಕಾಗಿ ಮಾಡಿಕೊಂಡು ಚೆಲ್ಲಾಟವಾಡುತ್ತಿದ್ದಾರೆ : ವಿ.ಎಸ್.ಉಗ್ರಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 17 : ಶತ ಶತಮಾನಗಳಿಂದಲೂ ಶೋಷಣೆಗೆ ಗುರಿಯಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನ್ಯಾಯ ಮಾಡುತ್ತಿವುದರಿಂದ ಹಕ್ಕುಗಳ ರಕ್ಷಣೆಗಾಗಿ ಜಾಗೃತರಾಗುವಂತೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಎಚ್ಚರಿಸಿದರು.

ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎಂಟು ಜಿಲ್ಲೆಗಳಲ್ಲಿ ಈಗಾಗಲೆ ಪ್ರವಾಸ ಮಾಡಿದ್ದೇನೆ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರು ಮೀಸಲಾತಿ ಹಕ್ಕು ನೀಡಿದ್ದಾರೆ. ಭಿಕ್ಷೆಯಲ್ಲ. ಸಾಮಾಜಿಕ, ಶೈಕ್ಷಣಿಕವಾಗಿ ಮುಂದುವರೆದಿರುವ ಜನಾಂಗಕ್ಕೆ ದೇಶದ ಪ್ರಧಾನಿ ಮೋದಿ ತರಾತುರಿಯಲ್ಲಿ ಶೇ. 10 ರಷ್ಟು ಮೀಸಲಾತಿ ನೀಡಿದರು. ರಾಜ್ಯದಲ್ಲಿ ಐವತ್ತು ಲಕ್ಷದಷ್ಟು ನಾಯಕ ಸಮಾಜದವರಿದ್ದಾರೆ. ಒಂದು ಕೋಟಿ ಇಪ್ಪತ್ತೈದು ಲಕ್ಷ ಪರಿಶಿಷ್ಟ ಜಾತಿಯವರಿದ್ದಾರೆ. ಎರಡು ಕಾಲು ಕೋಟಿ ಓ.ಬಿ.ಸಿ.ಗಳಿದ್ದಾರೆ. ಕುಲಶಾಸ್ತ್ರ ಅಧ್ಯಯನ ಪ್ರಕಾರ ಯಾರ್ಯಾರೂ ಅರ್ಹರಿದ್ದಾರೋ ಅವರನ್ನೆಲ್ಲಾ ಪರಿಶಿಷ್ಟ ವರ್ಗಕ್ಕೆ ಸೇರಿಸಲಿ ನಮ್ಮದೇನು ಅಭ್ಯಂತರವಿಲ್ಲ ಎಂದರು.

 

ರಾಜಕಾರಣಿಗಳು ಶೋಷಿತರನ್ನು ಮತ ಬ್ಯಾಂಕಾಗಿ ಮಾಡಿಕೊಂಡು ಚೆಲ್ಲಾಟವಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಮೀಸಲಾತಿ ಶೇ.50 ಕ್ಕಿ ಜಾಸ್ತಿಯಾಗಬಾರದೆಂದು ಸೂಚಿಸಿದೆ.
ತಮಿಳುನಾಡಿನಲ್ಲಿ ಶೇ.69 ರಷ್ಟು ಮೀಸಲಾತಿ ಜಾರಿಯಲ್ಲಿದೆ. ರಾಜ್ಯ ಸರ್ಕಾರ 23-10-2022 ರಂದು ಜಸ್ಟಿಸ್ ನಾಗಮೋಹನ್‍ದಾಸ್ ವರದಿ ಮೇಲೆ ಕಾನೂನು ಮಾಡಿರುವುದರಿಂದ ಶೋಷಿತ ಸಮುದಾಯಗಳಿಗೆ ನ್ಯಾಯ ಸಿಗುವುದಿಲ್ಲ. ಹಿಂದುಗಳು ನಾವೆಲ್ಲಾ ಒಂದು ಎಂದು ಹೇಳಿಕೊಳ್ಳುತ್ತಿರುವ ಪ್ರಧಾನಿ ಮೋದಿರವರು ಈ ಸಮಾಜಗಳಿಗೆ ಏಕೆ ನ್ಯಾಯ ಕೊಡುತ್ತಿಲ್ಲವೆಂದು ಪ್ರಶ್ನಿಸಿದರು?

 

ಆಲ್ ಪಾರ್ಟಿ ಶೆಡ್ಯೂಲ್ ಮೋದಿ ಬಳಿ ಹೋಗಿ ಮನವಿ ಮಾಡಿದ್ದೇವೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ನಿಗಧಿತ ಗಡುವಿನಲ್ಲಿ ಪ್ರಧಾನಿ ಮೋದಿ ಬಳಿ ನಿಯೋಗ ಹೋಗಿ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಲಿ. ಇನ್ನು ನಮ್ಮ ತಾಳ್ಮೆಯನ್ನು ಕೆಣಕಿದರೆ ಸುಮ್ಮನಿರಲ್ಲ. ಎಂ.ಆರ್.ನಾಯಕ ಹಿಂದುಳಿದ ವರ್ಗಗಳ
ಆಯೋಗದ ವರದಿಯನ್ನು ಬಹಿರಂಗಪಡಿಸಿ ಎಸ್ಸಿಪಿ. ಟಿಎಸ್ಪಿ. ಹಣ 4 ಲಕ್ಷ 40 ಸಾವಿರ ಕೋಟಿ ಬಜೆಟ್‍ನಲ್ಲಿ ಪರಿಶಿಷ್ಟ ವರ್ಗಕ್ಕೆ ಏಳು ಪರ್ಸೆಂಟ್ ಎಸ್ಟಿ.ಗಳಿಗೆ, ಹದಿನಾಲ್ಕು ಸಾವಿರ ಕೋಟಿ ರೂ. ಪರಿಶಿಷ್ಟ ಜಾತಿಗೆ, 35 ಸಾವಿರ ಕೋಟಿ ರೂ. ಹಿಂದುಳಿದ ವರ್ಗಗಳಿಗೆ ನೀಡಬೇಕು. ಎಸ್ಸಿ. ಎಸ್ಟಿ.ಗಳ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು. ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಮುಂದಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮಠಗಳಿಗೆ ಪ್ರತಿ ವರ್ಷ ಐದು ಕೋಟಿ ರೂ.ಅನುದಾನ ನೀಡುವಂತೆ ವಿ.ಎಸ್.ಉಗ್ರಪ್ಪ ಒತ್ತಾಯಿಸಿದರು.

 

ನಮ್ಮ ಸಮುದಾಯದಿಂದ ಗೆದ್ದು ಹೋಗಿರುವ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರುಗಳು ಏಕೆ ಮಾತನಾಡುತ್ತಿಲ್ಲ. ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ.ಅವ್ಯವಹಾರವಾಗಿದೆ. ಕೆಡುಕುಂಟು ಮಾಡುವವರ ವಿರುದ್ದ ಈಗಾಲಾದರೂ ಧ್ವನಿ ಎತ್ತದಿದ್ದರೆ ರಾಜ್ಯಾದ್ಯಂತ ಹೋರಾಡುತ್ತೇವೆಂದು ಎಚ್ಚರಿಸಿದರು.
ಕೆ.ಪಿ.ಸಂಪತ್‍ಕುಮಾರ್, ನರಸಿಂಹಯ್ಯ, ರಾಜಣ್ಣ, ವೇಣುಗೋಪಾಲನಾಯಕ, ಆನಂದ, ಡಾ.ಮಂಜುಳ, ಜಯಶ್ರಿಗುಡ್ಡೆಕಾಯಿ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...