Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಾನಿನ್ನೂ ಸತ್ತಿಲ್ಲ ಎಂದ ಪೂನಂ ಪಾಂಡೆ : ಪೋಸ್ಟ್ ಮಾಡಿ ಮಾಡಿದ ನಾಟಕಗಳೇನು..?

---Advertisement---

ನಿನ್ನೆಯೆಲ್ಲಾ ಮಾಡೆಲ್ ಕಮ್ ನಟಿ ಪೂನಂ ಪಾಂಡೆ ಸಾವುನ ಸುದ್ದಿಯೇ ಓಡಾಡುತ್ತಿತ್ತು. 32 ವರ್ಷಕ್ಕೆ ಸಾವನ್ನಪ್ಪಿದ ನಟಿಗೆ ಸಂತಾಪ ಸೂಚಿಸಿದವರೇ ಹೆಚ್ಚು. ಆದರೆ ಈಗ ದಿಢೀರನೆ ಪ್ರತ್ಯಕ್ಷವಾಗಿದ್ದಾರೆ. ವಿಡಿಯೋ ಮಾಡಿ, ಪೋಸ್ಟ್ ಮಾಡುವ ಮೂಲಕ ತಾನೂ ಬದುಕಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.

ನಾನು ಸತ್ತಿಲ್ಲ, ಬದುಕಿದ್ದೇನೆ. ಆದರೆ ಗರ್ಭಕಂಠದ ಕ್ಯಾನ್ಸರ್‌ ನ ಜಾಗೃತಿಗಾಗಿ ಈ ರೀತಿಯ ಸುಳ್ಳು ಹೇಳಿದ್ದೇನೆ. ದಯಮಾಡಿ ಕ್ಷಮಿಸಿ. ಆದರೆ ನನ್ನ ಸಾವಿನ ಸುದ್ದಿಯಿಂದಾಗಿ ಪ್ರತಿಯೊಬ್ಬರು ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಮತನಾಡಿದ್ದಾರೆ. ನಾನು ನನ್ನ ಸಾವಿನ ವಿಚಾರವಾಗಿ ಸುಳ್ಳು ಹೇಳಿದ್ದು ತಪ್ಪು. ಅದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ಫೆಬ್ರವರಿ 2ರಂದು ಪೂನಂ ಪಾಂಡೆ ಗರ್ಭಕಂಠದ ಕ್ಯಾನ್ಸರ್ ನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಆದರೆ ಆಕೆಯ ಕುಟುಂಬಸ್ಥರು ಈ ಸಾವಿನ ಸುದ್ದಿಯನ್ನು ನಂಬಿರಲಿಲ್ಲ. ಜೊತೆಗೆ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ.‌ಪೂನಂ ಪಾಂಡೆ ಬಾಡಿಗಾರ್ಡ್ ಕೂಡ ಈ ಸುದ್ದಿಯನ್ನು ಒಪ್ಪಿರಲಿಲ್ಲ. ಹೀಗಾಗಿಯೇ ಹಲವು ರೀತಿಯ ಅನುಮಾನಗಳು ಹುಟ್ಟಿಕೊಂಡಿದ್ದವು.

ಪೂನಂ ಪಾಂಡೆ ಸಾವಿನ ಸುದ್ದಿ ಬೇಗನೇ ಎಲ್ಲೆಡೆ ಹರಡಿತ್ತು. ಕೇವಲ 32 ವರ್ಷಕ್ಕೆ ಇಂಥ ಸಾವು ಬರಬಾರದಿತ್ತು ಎಂದೇ ಎಲ್ಲರು ಶಪಿಸಿದರು, ಮರುಗಿದರು. ಆದರೆ ಇಂದು ದಿಢೀರ್ ವಿಡಿಯೋ ಮೂಲಕ ಪ್ರತ್ಯಕ್ಷವಾದ ಪೂನಂ ಪಾಂಡೆ, ಸರ್ವಿಕಲ್ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡೊಸುವ ಕಾರಣಕ್ಕೆ ಈ ರೀತಿಯ ಸುಳ್ಳು ಹೇಳಬೇಕಾಗಿ ಬಂತು. ದಯವಿಟ್ಟು ನನ್ನ ಕ್ಷಮಿಸಿ ಎಂದು ಕೇಳಿಕೊಂಡಿದ್ದಾರೆ‌. ಇನ್ನು ಪೂನಂ ಪಾಂಡೆ ಗರ್ಭ ಕಂಠದ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment