Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಸತಿನಿಲಯ ಪ್ರವೇಶ: ಆನ್‌ಲೈನ್ ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

ದಾವಣಗೆರೆ : 2026-27ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ (scholarships), ಪ್ರೋತ್ಸಾಹಧನ ಹಾಗೂ ವಿದ್ಯಾರ್ಥಿನಿಲಯಗಳ (hostel)ಪ್ರವೇಶಕ್ಕಾಗಿ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.  ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ  2026-27ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷಗಳ ಒಳಗಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್‌  https://swd.karnataka.gov.in/ ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರೋತ್ಸಾಹಧನ: 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಿರಬೇಕು.

ಅರ್ಜಿಯ ಪ್ರತಿಯೊಂದಿಗೆ ಜಾತಿ ಪ್ರಮಾಣಪತ್ರ, ಅಂಕಪಟ್ಟಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಬ್ಯಾಂಕ್ ಪಾಸ್‌ಬುಕ್ ಹಾಗೂ ಆಧಾರ್ ಕಾರ್ಡ್‌ಗಳ ದೃಢೀಕೃತ ಜೆರಾಕ್ಸ್ ಪ್ರತಿಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು.

ವಿದ್ಯಾರ್ಥಿನಿಲಯಗಳಿಗೆ ಪ್ರವೇಶ: 2026-27ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ದಾವಣಗೆರೆ ಜಿಲ್ಲೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‌ಲೈನ್  https://swd.karnataka.gov.in/ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್‌ ತಿಳಿಸಿದ್ದಾರೆ.

Join WhatsApp

Join Now

Join Telegram

Join Now