Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೃದ್ಧರು ಹಾಗೂ ಅಂಗವಿಕಲರಿಗೆ ಪೋಸ್ಟಲ್ ಬ್ಯಾಲೆಟ್ : ಜಿಲ್ಲಾಧಿಕಾರಿ ದಿವ್ಯಪ್ರಭು .ಜೆ.ಆರ್.ಜೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಮಾ.29) :  ಈ ಬಾರಿ 80 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರು ಪೋಸ್ಟಲ್ ಬ್ಯಾಲೆಟ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು .ಜೆ.ಆರ್.ಜೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿಧಾನ ಸಭಾ ಚುನಾವಣೆ ಘೋಷಣೆ ಹಾಗೂ ಮಾದರಿ ನೀತಿ ಸಂಹಿತೆ ಜಾರಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸಂಬಂಧಪಟ್ಟ ಚುನಾವಣಾ ಅಧಿಕಾರಿಗಳ ಮುಖಾಂತರ ಪೋಸ್ಟ್‍ಲ್ ಬ್ಯಾಲೆಟ್ ಪಡೆಯಬಹುದು. ಒಮ್ಮೆ ಪೋಸ್ಟ್‍ಲ್ ಬ್ಯಾಲೆಟ್ ಪಡೆದವರು ಮತಗಟ್ಟೆಗೆ ಬಂದು ಮತ ಚಲಾಯಿಸಲು ಅವಕಾಶವಿಲ್ಲ.

ಸಾಮಾಜಿಕ ಮಾಧ್ಯಮ, ಆನ್‍ಲೈನ್ ಪ್ರೆಸ್,
ಇ-ಪೇಪರ್‍ಗಳಲ್ಲಿ ರಾಜಕೀಯ ಕುರಿತು ಸುದ್ಧಿ ಹಾಗೂ ಪ್ರಚಾರ ಮಾಡುವ ಮುನ್ನ ಎಂ.ಸಿ.ಎಂ.ಸಿ ಸಮಿತಿಯಿಂದ ಪ್ರೀ ಸರ್ಟಿಫಿಕೇಷನ್ ಪಡೆಯುವುದು ಕಡ್ಡಾಯ. ಇದರ ನಿರ್ವಹಣೆಗಾಗಿ ಪ್ರೀ ಸರ್ಟಿಫಿಕೇಷನ್ ತಂಡಗಳನ್ನು ಸಹ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜೆ.ಆರ್.ಜೆ ಈ ಸಂದರ್ಭದಲ್ಲಿ ತಿಳಿಸಿದರು.

ಚುನಾವಣೆ ಅಕ್ರಮ 52 ಪ್ರಕರಣಗಳಲ್ಲಿ ಶಿಕ್ಷೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್ ಮಾತನಾಡಿ, 2013 ಹಾಗೂ 2018ರ ವಿಧಾನಸಭಾ  ಹಾಗೂ 2019ರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ದಾಖಲಿಸಿದ ಪ್ರಕರಣಗಳ ಪೈಕಿ 52 ಪ್ರಕರಣಗಳ 138 ಜನರು ಶಿಕ್ಷೆಗೆ ಒಳಗಾಗಿದ್ದಾರೆ. ಇಂತಹವರ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಪ್ರತಿಬಂಧಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ದೃಷ್ಠಿಯಿಂದ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ 1020 ಜನರ ವಿರುದ್ಧ ಪ್ರತಿಬಂಧಕ ಪ್ರಕರಣಗಳನ್ನು ದಾಖಲಿಸಿ, ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ 1174 ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರಗಳು ಇವೆ. ಇದರಲ್ಲಿ ಬೇರೆ ಬೇರೆ ಕಾರಣಗಳಿಂದ 620 ಶಸ್ತ್ರಾಸ್ತ್ರಗಳು ಜಮೆಯಾಗಿವೆ. ಜಿಲ್ಲಾ ಚುನಾವಣಾ ಅಧಿಕಾರಿ ಆದೇಶ ನೀಡಿದ ತಕ್ಷಣ ಉಳಿದ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗುವುದು. ಹಣಕಾಸು ವ್ಯವಹಾರ ನಡೆಸುವ ಕಂಪನಿಗಳು, ಬ್ಯಾಂಕ್‍ಗಳು ಹಾಗೂ ತೀವ್ರತರನಾದ ಜೀವ ಭಯ ಇರುವ ವ್ಯಕ್ತಿಗಳು ಅಗತ್ಯವಾಗಿ ಶಸ್ತ್ರಾಸ್ತ್ರಗಳು ಬೇಕು ಎಂದರೆ, ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಗೆ ಅರ್ಜಿ ಸಲ್ಲಿಸಬಹದು. ಇದರ ವಾಸ್ತವತೆಯನ್ನು ಪೊಲೀಸ್ ಇಲಾಖೆಯಿಂದ ಸಮಾಲೋಚಿಸಿ ಶಸ್ತ್ರಾಸ್ತ್ರ ಹೊಂದಲು ಅವಕಾಶ ನೀಡಲಾಗುವುದು. ಚುನಾವಣಾ ಆಯೋಗ ನಿರ್ದೇಶನದಂತೆ ಈಗಾಗಲೇ ಚೆಕ್ ಪೊಸ್ಟ್‍ಗಳನ್ನು ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ. ಚುನಾವಣೆ ಕರ್ತವ್ಯಕ್ಕೆ ಸಿಬ್ಬಂದಿ ನೇಮಿಸಲು ಕರಡು ಯೋಜನೆ ರೂಪಿಸಿ, ಚುನಾವಣೆ ಆಯೋಗ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ. ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ, ಹಿರಿಯೂರು ವಿಧಾನಸಭಾ ಕ್ಷೇತ್ರಗಳಿಗೆ 4 ಸಿಆರ್‍ಪಿಎಫ್ ತುಕಡಿಗಳನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗುವುದು. ಈ ತುಕಡಿಗಳ ಸಿಬ್ಬಂದಿಗಳ ವಾಸ್ತವ್ಯ ಹಾಗೂ ಸೂಕ್ತ ವಾಹನಗಳ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗುವುದು ಎಂದರು.

ಜಿಲ್ಲೆಯಲ್ಲಿ 377 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಇದರಲ್ಲಿ 110 ದುರ್ಬಲ ಮತಗಟ್ಟೆಗಳು ಇವೆ. ಈ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾರರಿಗೆ ಬೆದರಿಸಿ ಪ್ರಭಾವ ಬೀರುವ 189 ಜನರನ್ನು ಗುರುತಿಸಿ ಪ್ರತಿಬಂಧಕ ಪ್ರಕರಣ ದಾಖಲಿಸಲಾಗಿದೆ. ಇದರೊಂದಿಗೆ ಜಿಲ್ಲೆಯ 8 ಜನರ ಗಡಿಪಾರಿಗೆ ಉಪ ವಿಭಾಗಧಿಕಾರಿ ದಂಡಾಧಿಕಾರಿಗಳಿಗೆ ಸಲ್ಲಿಸಲಾಗಿದೆ. ಇದರಲ್ಲಿ 3 ಜನರನ್ನು ಗಡಿಪಾರು ಮಾಡಿ, ಬೇರೆ ಜಿಲ್ಲೆಯಲ್ಲಿ ಬಿಟ್ಟುಬಂದು ಅನುಪಾಲನಾ ವರದಿ ಸಲ್ಲಿಸಲಾಗಿದೆ. ಒಬ್ಬ ವ್ಯಕ್ತಿಯ ವಿರುದ್ಧ ಗುಂಡಾ ಕಾಯ್ದೆ ದಾಖಲಿಸಲು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದುವರೆವಿಗೂ ಜಿಲ್ಲೆಯ ಚೆಕ್ ಪೋಸ್ಟ್‍ಗಳಲ್ಲಿ ವಶಪಡಿಸಿಕೊಂಡ ಹಣ, ಮದ್ಯ ಹಾಗೂ ವಸ್ತುಗಳು ಯಾವುದೇ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿಲ್ಲ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ ಎಂದರು.

ಮಾದರಿ ಚುನಾವಣೆ ನೀತಿ ಸಂಹಿತೆ ಅನ್ವಯ ರೂ.50 ಸಾವಿರ ಮೇಲ್ಪಟ್ಟ ಹಣವನ್ನು ತೆಗೆದುಕೊಂಡು ಹೋಗಲು ಸೂಕ್ತ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ಇಲ್ಲವಾದರೆ ಹಣವನ್ನು ಚೆಕ್ ಪೋಸ್ಟ್‍ಗಳಲ್ಲಿ ಜಪ್ತಿ ಮಾಡಿ, ಜಿ.ಪಂ. ಸಿಇಓ ನೇತೃತ್ವದ ನಗದು ಜಪ್ತಿ ಸಮಿತಿ ಒಪ್ಪಿಸಲಾಗುವುದು. ಈ ಹಣ ಚುನಾವಣೆ ಸಂಬಂದಪಟ್ಟಿದ್ದು ಅಲ್ಲ ಎಂದು ನಿರೂಪಿಸಿ ಸೂಕ್ತ ದಾಖಲೆಗಳನ್ನು ಒದಗಿಸಿ ಹಣ ಮರಳಿ ಪಡೆಯಬಹುದು. ಒಂದು ವೇಳೆ ಚುನಾವಣೆ ಅಕ್ರಮಗಳಿಗೆ ಹಣ ಸಾಗಟ ಮಾಡುತ್ತಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದರು.

ಹೆಚ್ಚಿನ ಮತದಾನ ಗುರಿ:ಜಿ.ಪಂ. ಸಿಇಓ ಎಂ.ಎಸ್.ದಿವಾಕರ್ ಮಾತನಾಡಿ ಕಳೆದ ಬಾರಿ ಜಿಲ್ಲೆಯಲ್ಲಿ ಸರಾಸರಿ ಶೇ.80.86 ರಷ್ಟು ಮತದಾನ ಆಗಿತ್ತು. ಇದು ರಾಜ್ಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಾಗಿದೆ. ಜಿಲ್ಲಾ ಸರಾಸರಿ ಮತದಾನ ಪ್ರಮಾಣಕ್ಕಿಂತ 585 ಮತಗಟ್ಟೆಗಳಲ್ಲಿ ಕಡಿಮೆ ಮತದಾನವಾಗಿದೆ. ಈ ಮತಗಟ್ಟೆ ವ್ಯಾಪ್ತಿಗಳಲ್ಲಿ ಸ್ವೀಪ್ ಕಾರ್ಯಚಟುವಟಿಕೆಗಳನ್ನು ಹೆಚ್ಚಾಗಿ ಮಾಡಲಾಗಿದೆ. ಶಿಕ್ಷಣ ಇಲಾಖೆ ಸಿಆರ್‍ಪಿ ನೇತೃತ್ವದಲ್ಲಿ ಬಿಎಲ್‍ಓ ಅಂಗನವಾಡಿ ಕಾರ್ಯಕರ್ತರು ಹಾಗೂ ಶಿಕ್ಷಕರು ಮನೆ ಮನೆಗೆ ತೆರಳಿ ಮತದಾನದ ಮಹತ್ವ ತಿಳಿಸುತ್ತಿದ್ದಾರೆ. ಈ ಬಾರಿ ಮತದಾನ ಪ್ರಮಾಣವನ್ನು ಕಳೆದ ಬಾರಿಗಿಂತ ಶೇ.10 ರಷ್ಟು ಹೆಚ್ಚಿಸುವ ಗುರಿ ಹೊಂದಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ಹಾಗೂ ನೆರಳಿನ ವ್ಯವಸ್ಥೆ ಮಾಡಲಾಗುತ್ತಿದೆ. ದೂರದ ಊರುಗಳಿಗೆ ದುಡಿಯಲು ತೆರಳಿರುವವರನ್ನು ಸಹ ಸಂಬಂಧಿಗಳ ಮೂಲಕ ಕರೆತರುವ ಪ್ರಯತ್ನ ಮಾಡಲಾಗುವುದು.  ಜಿಲ್ಲೆಯಲ್ಲಿ ಮತದಾನ ನಡೆಯುವ 3 ದಿನಗಳ ಮುನ್ನ ಆಮಂತ್ರಣ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆ ತೆರಳಿ ಮತಗಟ್ಟೆ ಆಗಮಿಸಿ ಮತದಾನ ಮಾಡುವಂತೆ ಕರೆ ನೀಡಲಿದ್ದಾರೆ ಎಂದರು.
ಕಳೆದ ಬಾರಿ ಸಾಹಸಿ ಜ್ಯೋತಿರಾಜ್ ಅವರನ್ನು ಜಿಲ್ಲಾ ಚುನಾವಣಾ ರಾಯಭಾರಿಯಾಗಿ ನೇಮಿಸಲಾಗಿತ್ತು. ರಾಯಭಾರಿ ಸ್ಥಾನದಿಂದ ಮುಕ್ತಗೊಳಿಸುವಂತೆ ಜ್ಯೋತಿರಾಜ್ ಸ್ವತಃ ಪತ್ರ ಬರೆದು ಕೋರಿದ್ದರಿಂದ ಅವರನ್ನು ಕೈಬಿಡಲಾಗಿದೆ. ಹಿರಿಯೂರಿನ ಕಾಮಿಡಿಯನ್ ಬರ್ಕತ್ ಅಲಿ ಅವರನ್ನು ಈ ಬಾರಿ ಜಿಲ್ಲಾ ಚುನಾವಣಾ ರಾಯಭಾರಿಯಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!