Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸಾಹಿತ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 09 : ಜಿಲ್ಲಾ ಸಾಹಿತ್ಯ ಸಮ್ಮೇಳನದ ಕರಪತ್ರ ಮತ್ತು ಭಿತ್ತಿಪತ್ರ (ಪೋಸ್ಟರ್) ಗಳನ್ನು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರ ಸ್ವಾಮಿ ಸೋಮವಾರ ಬಿಡುಗಡೆಗೊಳಿಸಿದರು.

ನಗರದಲ್ಲಿ 18 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ 17 ಮತ್ತು 18 ರಂದು ಜರುಗಲಿದೆ. ಈ ಹಿನ್ನೆಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಟಿ.ವೆಂಕಟೇಶ್ ರವರು ಸಮ್ಮೇಳನದಲ್ಲಿ ಭಾಗವಹಿಸಲು ಜಿಲ್ಲೆಯ ಎಲ್ಲ ಸರಕಾರಿ ನೌಕರರಿಗೆ ಅನ್ಯಕಾರ್ಯನಿಮಿತ್ತ ಸೌಲಭ್ಯ (ಒಒಡಿ) ಸೌಲಭ್ಯವನ್ನು ಮಂಜೂರು ಮಾಡಿದ್ದಾರೆ.
ಮೆರವಣಿಗೆಗೆ ಅಗತ್ಯವಾದ ಕಲಾತಂಡಗಳನ್ನು ಒದಗಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಸೂಚಿಸುವುದಾಗಿ ಅಪರಜಿಲ್ಲಾಧಿಕಾರಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಮ್ಮೇಳನದ ಪೋಸ್ಟರ್ ಮತ್ತು ಸದಸ್ಯತ್ವ ನೊಂದಣಿಯಾದವರಿಗೆ ನೀಡಲಾಗುವ ಕಿಟ್‍ಗಳನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ವಿ.ಎಲ್.ಪ್ರಶಾಂತ್, ಜಿಲ್ಲಾ ಕಾರ್ಯದರ್ಶಿ ವಿ.ಶ್ರೀನಿವಾಸ ಮಳಲಿ, ಪದಾಧಿಕಾರಿಗಳಾದ ಚೌಳೂರು ಲೋಕೇಶ್, ಸೌಮ್ಯ ಬಾನಾಡಿ, ರಜನಿ ಲೇಪಾಕ್ಷಿ, ಸಿ.ಎಂ.ಚಂದ್ರಶೇಖರ್, ಮಹಾಂತೇಶ್ ಮತ್ತಿತರರಿದ್ದರು.

ನೊಂದಣಿ ಆರಂಭ ಸರಕಾರಿ ನೌಕರರು ಸಮ್ಮೇಳನದಲ್ಲಿ ಹಾಜರಾಗಿ ಯಶಸ್ವಿಗೊಳಿಸಲು ಸಾಹಿತ್ಯ ಪರಿಷತ್ತು ವಿನಂತಿಸಿದೆ. ಭಾಗವಹಿಸಿದ ನಂತರ ಹಾಜರಾದ ಬಗ್ಗೆ ಪರಿಷತ್ತಿನ ವತಿಯಿಂದ ನೀಡಲಾಗುವ ಪ್ರಮಾಣ ಪತ್ರವನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಸಲ್ಲಿಸಬೇಕು. ಆಜೀವ ಸದಸ್ಯರು, ಸಾಹಿತಿಗಳು ಸೇರಿದಂತೆ ಹಾಗೂ ಸಾರ್ವಜನಿಕರಿಗೆ ನೊಂದಣಿ ಕಾರ್ಯ ಆರಂಭಿಸಲಾಗಿದೆ. 500 ರೂಗಳನ್ನು ನೀಡಿ ನೊಂದಾಯಿಸಿದ ಪ್ರತಿನಿಧಿಗಳಿಗೆ ಆಕರ್ಷಕ ಕಿಟ್ ನೀಡಲಾಗುವುದು. ಇದರಲ್ಲಿ ಟ್ರಾವೆಲ್ ಬ್ಯಾಗ್, ಮೆಟಲ್ ಬ್ಯಾಡ್ಜ್, ಲೋಹದ ನಿರ್ಮಿಸಿದ ಪೆನ್, ಕನ್ನಡ ಶಾಲು ಮತ್ತು ಬರೆಯುವ ಕಿರುಪುಸ್ತಕ ಒಳಗೊಂಡಿದೆ. ಆಯಾ ತಾಲ್ಲೂಕುಗಳ ಕಸಾಪ ಅಧ್ಯಕ್ಷರುಗಳಲ್ಲಿ ನೊಂದಾಯಿಸಬಹುದಾಗಿದೆ. ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯಲ್ಲಿನ ಅಪ್ಪಾಜಿ ಪರಿಸರ ಕಟ್ಟಡದ ಕಚೇರಿಯಲ್ಲಿ ನೇರ ನೊಂದಣಿ ಅವಕಾಶವಿದೆ. ಹೆಚ್ಚಿನ ವಿವರಕ್ಕೆ ಸಂಪರ್ಕಿಸಿ. 9972155177, 9449759219, 9449510078

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...