Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜನಸಂಖ್ಯೆ ಹೆಚ್ಚಳದಿಂದ ಬಡತನ ಹಾಗೂ ನಿರುದ್ಯೋಗ : ಡಾ. ಬಿ.ವಿ.ಗಿರೀಶ್

---Advertisement---
ಚಿತ್ರದುರ್ಗ. ಜೂನ್. 23:  ಜನಸಂಖ್ಯೆ ಹೆಚ್ಚಳದಿಂದ ಬಡತನ, ನಿರುದ್ಯೋಗ ಪ್ರಮಾಣವು ಹೆಚ್ಚಾಗುತ್ತದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಬಿ.ವಿ.ಗಿರೀಶ್ ಹೇಳಿದರು.
 ತಾಲೂಕಿನ ವಿಜಾಪುರ ಗ್ರಾಮದ ಶಬರ ಶಂಕರ ವಸತಿ ಪ್ರೌಢಶಾಲೆಯಲ್ಲಿ ಸೋಮವಾರ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ, ಆಯೋಜಿಸಲಾದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನಸಂಖ್ಯೆ ಹೆಚ್ಚಿದಂತೆ ಆಹಾರ, ನೀರು, ಬಟ್ಟೆ, ಕೊರತೆಯಾಗಿ ವಾಯು ಜಲ ಮಾಲಿನ್ಯ, ಶಿಕ್ಷಣದ ಕೊರತೆ ಉಂಟಾಗಿ ಸಾಂಕ್ರಾಮಿಕ ರೋಗಗಳು ತಲೆದೋರುತ್ತವೆ. ಜನಸಂಖ್ಯೆ ನಿಯಂತ್ರಣ ಮಾಡಿದಲ್ಲಿ ಸಾಂಕ್ರಾಮಿಕ ರೋಗಗಳನ್ನು ದೂರ ಮಾಡಬಹುದು. ಮದುವೆಯ ವಯಸ್ಸು ಹೆಣ್ಣಿಗೆ 18 ವರ್ಷ ಮತ್ತು ಗಂಡಿಗೆ 21 ವರ್ಷ, ಬಾಲ್ಯಾವಸ್ಥೆಯಲ್ಲಿ ಇದರ ಬಗ್ಗೆ ಮಾಹಿತಿ ತಿಳಿದು ಮುಂದಿನ ಭವಿಷ್ಯ ರೂಪಿಸಿಕೊಳ್ಳಬೇಕೆಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ ಜನಸಂಖ್ಯಾ ಹೆಚ್ಚಳ ದೇಶಾಭಿವೃದ್ಧಿಗೆ ಮಾರಕ ಕುಟುಂಬದ ಗಾತ್ರ ಹೆಚ್ಚು ಇದ್ದಲ್ಲಿ ಶಿಕ್ಷಣದ ಕೊರತೆ, ಅರಣ್ಯನಾಶ, ಆಹಾರದ ಕೊರತೆ, ವಾಯು, ನೆಲ, ಜಲ ಕಲುಷಿತಗೊಂಡು ಜೀವಸಂಕುಲಕ್ಕೆ ಭಾರಿ ಹೊಡೆತ ಉಂಟಾಗುತ್ತದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ವಿದ್ಯಾರ್ಥಿ ದೆಸೆಯಲ್ಲಿ ಜನಸಂಖ್ಯಾ ಶಿಕ್ಷಣ ತುಂಬಾ ಅವಶ್ಯಕವಾದದ್ದು, ಜನಸಂಖ್ಯಾ ಸ್ಫೂಟಕ್ಕೆ ಬಾಲ್ಯ ವಿವಾಹವು ಒಂದು ಕಾರಣ. ಯಾವುದೇ ಒತ್ತಡಕ್ಕೆ ಮಣಿಯಬೇಡಿ ಬಾಲ್ಯ ವಿವಾಹಕ್ಕೆ ಆಸ್ಪದ ಕೊಡಬೇಡಿ ಎಂದರು.
ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಾನಕಿ, ಮುಖ್ಯೋಪಾಧ್ಯಾಯ ಸಣ್ಣತಿಪ್ಪಯ್ಯ, ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರ್, ಆಶಾ ಕಾರ್ಯಕರ್ತೆ ಮಮತಾ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...