ಚಿತ್ರದುರ್ಗ. ನ.17: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ, ಚಿತ್ರದುರ್ಗ 66/11 ಕೆ.ವಿ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಅರಸನಘಟ್ಟ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ನವೆಂಬರ್ 18ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು : ಚಿತ್ರದುರ್ಗದ ನಗರ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾಡನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ ,ಅರಸನಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳುಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
















