ಚಿತ್ರದುರ್ಗ. ಸೆ.24: ಚಿತ್ರದುರ್ಗ ನಗರದ ಚಂದ್ರವಳ್ಳಿ ಮಾರ್ಗದಲ್ಲಿ ಬರುವ ಧವಳಗಿರಿ ಬಡಾವಣೆ, ಚೌಡೇಶ್ವರಿ ಲೇಔಟ್, ಬುರುಜನಹಟ್ಟಿ, ಹೊಳಲ್ಕೆರೆ ರಸ್ತೆ, ಕೆಎಸ್ಆರ್ಟಿಸಿ ಬಸ್ಟಾಂಡ್, ಖಾಸಗಿ ಬಸ್ ನಿಲ್ದಾಣ, ಸಂತೆ ಹೊಂಡ, ಫಿಶ್ ಮಾರ್ಕೆಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಳೆ ವೈರ್ ಬದಲಾವಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಇದೇ ಸೆಪ್ಟೆಂಬರ್ 25ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಎಲ್ಲ ಗ್ರಾಹಕರು ವಿದ್ಯುತ್ ನಿಲುಗಡೆಯ ಸಮಯದಲ್ಲಿ ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ನಗರದ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

