Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

---Advertisement---

 

ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ಪೂರೈಕೆಯಲ್ಲಿ ಇನ್ನಷ್ಟು ಸುಧಾರಣೆ ತರುವ ಉದ್ದೇಶದಿಂದ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಪ್ರಸ್ತುತ ನಗರ ಫೀಡರ್ ಮೂಲಕವೇ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲಾಗುತ್ತಿದೆ.

ವಿದ್ಯುತ್ ನಿರ್ಹವಣೆ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ವ್ಯತ್ಯಯ ತುಮಕೂರು ಹೊರ ವಲಯದಲ್ಲಿ ಬರುವ ಕೆಲವು ಹಳ್ಳಿಗಳಿಗೆ ಮಾತ್ರ ಸೀಮಿತಗೊಳಿಸಲಾಗಿದೆ ಈ ಕೆಳಗಿನ ಪ್ರದೇಶಗಳಲ್ಲಿ ದಿನ ಬಿಟ್ಟು ದಿನ ವಿದ್ಯುತ್ ವ್ಯತ್ಯಯ ಆಗಲಿದೆ.

ಗೋವಿಂದನಗರ, ಹೌಸಿಂಗ್ ಬೋರ್ಡ್ , ಗುಬ್ಬಿ ಗೇಟ್ ಕುಂಟಮ್ಮನತೋಟ, ದಿಬ್ಬೂರು , ಬಿ.ಎಚ್. ಪಾಳ್ಯ, ಹಾರೋನಹಳ್ಳಿ ಹಾಗೂ ಹೊನ್ನೆನಹಳ್ಳಿಯಲ್ಲಿ ಫೆಬ್ರವರಿ 24 ಹಾಗೂ 27 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಹನುಮಂತಪುರ, ಕುವೆಂಪುನಗರ, ಆದರ್ಶನಗರ , ಆಣೆತೋಟ, ಜಗನ್ನಾಥನಗರ, ಶಾರದಾದೇವಿ ನಗರ, ಗಣೇಶನಗರ ಹಾಗೂ ನಿರ್ವಾಣಿ ಬಡಾವಣೆಯಲ್ಲಿ ಫೆಬ್ರವರಿ 28 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ನಿರ್ಹವಣೆ ಕಾಮಗಾರಿ ಕೆಲವೇ ಪ್ರದೇಶಗಳಿಗೆ ಸೀಮಿತಗೊಂಡಿರುವುದರಿಂದ ತುಮಕೂರು ನಗರ ಹಾಗೂ ಕೈಗಾರಿಕೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...