ಚಿತ್ರದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕಿನ ಈ ಊರುಗಳಲ್ಲಿ ಸೆಪ್ಟೆಂಬರ್ 19 ರಂದು ವಿದ್ಯುತ್ ವ್ಯತ್ಯಯ

1 Min Read

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 17 : ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ, ಚಿತ್ರದುರ್ಗ 66/11 ಕೆ.ವಿ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿ ಕೋರಿರುವುದರಿಂದ ವಿ.ವಿ ಕೇಂದ್ರಂಗಳಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಸೆಪ್ಟೆಂಬರ್ 19 ರಂದು ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ.

ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು :
ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ ಮತ್ತು ಸುತ್ತಮುತ್ತಲಿನ ಗ್ರಾಮಗಳು. ಗ್ರಾಹಕರು ಸಹಕರಿಸಬೇಕಾಗಿ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Enable Notifications OK No thanks