ಚಿತ್ರದುರ್ಗ. ಆ.11: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ಶಾಖಾ ವ್ಯಾಪ್ತಿಯ ಜಾನುಕೊಂಡ ಗ್ರಾಮದ ಹತ್ತಿರ ಎಲ್.ಟಿ ಮಾರ್ಗದ ವಾಹಕ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇದೇ ಆಗಸ್ಟ್ 12 ಮತ್ತು 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: 66/11 ಕೆವಿ ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-8 ಸೋಲ್ಲಾಪುರ ಎನ್.ಜೆ.ವೈ 11ಕೆವಿ ಮಾರ್ಗದಲ್ಲಿ ವಿದ್ಯುತ್ ಅಡಚಣೆಯಾಗಲಿದೆ.
ಪಂಡರಹಳ್ಳಿ ವ್ಯಾಪ್ತಿಯ ಜಾನುಕೊಂಡ, ಸಿದ್ದಾಪುರ, ಮಾಳಪ್ಪನಹಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












