ಚಿತ್ರದುರ್ಗ,(ಮಾ.11) :ಮಾರ್ಚ್ 12 ರಂದು ಬೆಳಿಗ್ಗೆ 10 ರಿಂದ ಮಧ್ಯಾನ್ಹ 3 ಗಂಟೆವರೆಗೆ ಈ ಕೆಳಗೆ ತಿಳಿಸಿದ ನಗರ ಪ್ರದೇಶ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಚಿತ್ರದುರ್ಗ ನಗರ, ಕೆಳಗೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಳಘಟ್ಟ, ಗುಡ್ಡದರಂಗವ್ವನಹಳ್ಳಿ, ವಿದ್ಯಾನಗರ, ಸೀಬಾರ, ಸಿ.ಜಿ.ಹಳ್ಳಿ, ಜೆ.ಸಿ.ಆರ್ ಬಡಾವಣೆ, ಚಂದ್ರವಳ್ಳಿ, ಪಿಲ್ಲೇಕೆರನಹಳ್ಳಿ, ಮಿಲ್ಲತ್ ಏರಿಯಾ, ಕೆ.ಡ್ಲೂ.ಎಸ್.ಎಸ್.ಬಿ, ಯುನಿವರ್ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶ ಹಾಗೂ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.